ಯುವ ನಿರ್ದೇಶಕ ಚಲ ಅವರು ಕತೆ, ಚಿತ್ರಕತೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿರುವ ಚಿತ್ರ ‘ಅಂದವಾದ’ ತೆರೆಗೆ ಬರಲು ಸಜ್ಜಾಗಿದೆ.

ಚಿತ್ರೀಕರಣ ಹಾಗೂ ಪೋಸ್ಟ್ ಪ್ರೊಡಕ್ಷನ್ ಮುಗಿಸಿದ್ದು, ಟ್ರೇಲರ್ ಇದೇ ತಿಂಗಳು ಬಿಡುಗಡೆಯಾಗಲಿದೆ. ಅಕ್ಟೋಬರ್ನಲ್ಲಿ ತೆರೆಗೆ ತರುವ ಯೋಜನೆ ಚಿತ್ರತಂಡದ್ದು. ಈಗಾಗಲೇ ಟೀಸರ್ಗೆ ಸಿಕ್ಕಿರುವ ಪ್ರತಿಕ್ರಿಯೆಯಿಂದ ಚಿತ್ರತಂಡ ಖುಷಿಯಲ್ಲಿದೆ.ಮಳೆಗಾಲದಲ್ಲಿ ನಡೆಯುವ ಬೆಚ್ಚನೆಯ ಪ್ರೇಮಕಥೆಯ ಈ ಚಿತ್ರದ ಬಹು ಭಾಗವನ್ನು ನಿರ್ದೇಶಕರು ಮಳೆಗಾಲದಲ್ಲೇ ಚಿತ್ರೀಕರಣ ನಡೆಸಿದ್ದಾರೆ.ಚಿತ್ರದಲ್ಲಿ ನಾಲ್ಕು ಹಾಡುಗಳಿದ್ದು, ಎಲ್ಲವೂ ಈಗಾಗಲೇ ಹಿಟ್ ಆಗಿವೆ.

ಮಧುಶ್ರೀ ಗೋಲ್ಡ್ ಫ್ರೇಮ್ಸ್ ಲಾಂಛನದಲ್ಲಿ ಈ ಚಿತ್ರವನ್ನು ಡಿ.ಆರ್. ಮಧು ಜಿ. ರಾಜ್ ನಿರ್ಮಿಸುತ್ತಿದ್ದಾರೆ. ವಿಕ್ರಮ್ ವರ್ಮನ್ ಸಂಗೀತ, ಗುರುಕಿರಣ್ ಹಿನ್ನೆಲೆ ಸಂಗೀತ, ಹರೀಶ್ ಎನ್. ಸೊಂಡೇಕೊಪ್ಪ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಮುರಳಿ ನೃತ್ಯ ನಿರ್ದೇಶನ. ಮೋಹನ್ ಬಿ. ಕೆರೆ ಕಲಾ ನಿರ್ದೇಶನವಿದೆ.

ಯೋಗರಾಜ್ ಭಟ್, ಜಯಂತ ಕಾಯ್ಕಿಣಿ, ಹೃದಯ ಶಿವ ಸಾಹಿತ್ಯ ಬರೆದಿದ್ದಾರೆ. ಜೈ, ಅನುಷಾ ರಂಗನಾಥ್, ಹರೀಶ್ ರೈ, ಕೆ.ಎಸ್. ಶ್ರೀಧರ್, ಕೆ.ವಿ. ಮಂಜಯ್ಯ, ರೇಖಾ ಸಾಗರ್, ರೋಜಾ, ಮಂಗಳೂರು ಮೀನಾನಾಥ್ ತಾರಾಗಣದಲ್ಲಿ ಇದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.