ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

5 ದಿನದಲ್ಲಿ ₹425 ಕೋಟಿ ಗಳಿಸಿದ ರಣಬೀರ್‌ –ರಶ್ಮಿಕಾ ಅಭಿನಯದ ‘ಅನಿಮಲ್‌’

Published 6 ಡಿಸೆಂಬರ್ 2023, 7:01 IST
Last Updated 6 ಡಿಸೆಂಬರ್ 2023, 7:01 IST
ಅಕ್ಷರ ಗಾತ್ರ

ಮುಂಬೈ: ಬಾಲಿವುಡ್ ನಟ ರಣಬೀರ್ ಕಪೂರ, ರಶ್ಮಿಕಾ ಮಂದಣ್ಣ ಅಭಿನಯದ ‘ಅನಿಮಲ್’ ಚಿತ್ರ ಡಿಸೆಂಬರ್ 1ರಂದು ವಿಶ್ವದಾದ್ಯಂತ ತೆರೆಕಂಡಿದ್ದು, ಐದೇ ದಿನಗಳಲ್ಲಿ ಜಾಗತಿಕವಾಗಿ ಬಾಕ್ಸ್ ಆಫಿಸ್‌ನಲ್ಲಿ ₹425 ಕೋಟಿ ಗಳಿಸಿದೆ ಎಂದು ಚಿತ್ರ ನಿರ್ಮಾಪಕರು ಹೇಳಿದ್ದಾರೆ.

ಸಂದೀಪ್ ರೆಡ್ಡಿ ವಂಗ ನಿರ್ದೇಶನದ ಚಿತ್ರವು ತೆಲುಗು, ಕನ್ನಡ, ತಮಿಳು, ಹಿಂದಿ, ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಿತ್ತು.

ದೇಶದಲ್ಲಿ ಮಂಗಳವಾರ ₹38.25 ಕೋಟಿ ಗಳಿಸುವ ಮೂಲಕ 5 ದಿನಗಳಲ್ಲಿ ₹283.74 ಕೋಟಿ ಗಳಿಸಿದೆ. ಜತೆಗೆ ₹300 ಕೋಟಿ ಕ್ಲಬ್‌ನತ್ತ ಮುನ್ನುಗ್ಗುತ್ತಿದೆ. ಪ್ರಸ್ತುತ ಭಾರತದಲ್ಲಿ ರಣಬೀರ್ ಕಪೂರ್ ಅವರ ಹೆಚ್ಚು ಗಳಿಕೆಯ ಚಿತ್ರ ಇದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT