ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನಿರುದ್ಧ್‌ಗೆ ಜೊತೆಯಾದ ನಿಧಿ ಸುಬ್ಬಯ್ಯ

Published 23 ಜುಲೈ 2023, 19:35 IST
Last Updated 23 ಜುಲೈ 2023, 19:35 IST
ಅಕ್ಷರ ಗಾತ್ರ

ನಟ ಅನಿರುದ್ಧ್ ಜತ್ಕರ್ ಕಿರುತೆರೆಯಿಂದ ಮತ್ತೆ ಹಿರಿತೆರೆಯತ್ತ ಹೊರಳಿದ್ದಾರೆ. ಇತ್ತೀಚೆಗಷ್ಟೇ ವಿಜಯ್‌ ರಾಘವೇಂದ್ರ ಅವರ ‘ರಾಘು’ ಚಿತ್ರಕ್ಕೆ ಆ್ಯಕ್ಷನ್‌–ಕಟ್‌ ಹೇಳಿದ್ದ ಎಂ.ಆನಂದರಾಜ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಚಿತ್ರದಲ್ಲಿ ಅನಿರುದ್ಧ್‌ ನಾಯಕರಾಗಿ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಮೈಸೂರಿನ ಡಾ||ವಿಷ್ಣುವರ್ಧನ್ ಸ್ಮಾರಕದಲ್ಲಿ ಭಾರತಿ ವಿಷ್ಣುವರ್ಧನ್ ಚಿತ್ರಕ್ಕೆ ಚಾಲನೆ ನೀಡಿ ಶುಭಹಾರೈಸಿದರು.

ಅನಿರುದ್ಧ್ ಅವರಿಗೆ ನಾಯಕಿಯರಾಗಿ ನಿಧಿ ಸುಬ್ಬಯ್ಯ ಹಾಗೂ ‘ಲವ್ ಮಾಕ್ಟೇಲ್ 2’ ಖ್ಯಾತಿಯ ರೆಚೆಲ್ ಡೇವಿಡ್‌ ಕಾಣಿಸಿಕೊಳ್ಳುತ್ತಿದ್ದಾರೆ. ಆಗಸ್ಟ್ 10ರಿಂದ ಚಿತ್ರದ ಚಿತ್ರೀಕರಣ ಆರಂಭವಾಗಲಿದ್ದು, ಬೆಂಗಳೂರು, ತುಮಕೂರು ಹಾಗೂ ಮಂಗಳೂರಿನಲ್ಲಿ ಚಿತ್ರೀಕರಣ ನಡೆಯಲಿದೆ.‌

ದಮ್ತಿ ಪಿಕ್ಚರ್ಸ್ ಲಾಂಛನದಲ್ಲಿ ರೂಪ ಡಿ.ಎನ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಉದಯಲೀಲಾ ಛಾಯಾಗ್ರಹಣ, ವಿಜೇತ್ ಚಂದ್ರ ಸಂಕಲನ, ರಿತ್ವಿಕ್ ಮುರಳಿಧರ್ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಶರತ್ ಲೋಹಿತಾಶ್ವ, ಕೆ.ಎಸ್ ಶ್ರೀಧರ್, ಶಿವಮಣಿ ಮುಂತಾದವರು ತಾರಾಬಳಗದಲ್ಲಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT