ಧನಂಜಯ ನಟನೆಯ ‘ಅಣ್ಣ ಫ್ರಂ ಮೆಕ್ಸಿಕೊ’ ಸಿನಿಮಾದ ಆಡಿಯೊ ಹಕ್ಕುಗಳನ್ನು ಆನಂದ್ ಆಡಿಯೊ ಖರೀದಿಸಿದೆ.

2023ರಲ್ಲಿ ಸೆಟ್ಟೇರಿದ ಸಿನಿಮಾವನ್ನು ದಿ ರಾಯಲ ಸ್ಟುಡಿಯೋಸ್ ಅಡಿಯಲ್ಲಿ ಸತ್ಯ ರಾಯಲ ನಿರ್ಮಿಸಿದ್ದು. ಐರಾ ಫಿಲ್ಮ್ಸ್ ಕೂಡ ಕೈಜೋಡಿಸಿದೆ. ‘ಬಡವ ರಾಸ್ಕಲ್’ ಸಿನಿಮಾ ಖ್ಯಾತಿಯ ಶಂಕರ್ ಗುರು ನಿರ್ದೇಶನದ ಈ ಚಿತ್ರವನ್ನು ಜೀ ಸ್ಟುಡಿಯೊಸ್ ಬಿಡುಗಡೆ ಮಾಡಲಿದೆ. 2021ರಲ್ಲಿ ತೆರೆಗೆ ಬಂದ ‘ಬಡವ ರಾಸ್ಕಲ್’ ಚಿತ್ರದ ಮೂಲಕ ಧನಂಜಯ ‘ಡಾಲಿ ಪಿಕ್ಚರ್ಸ್’ನಡಿ ಸಿನಿಮಾ ನಿರ್ಮಾಣ ಕ್ಷೇತ್ರಕ್ಕೆ ಕಾಲಿಟ್ಟಿದ್ದರು. ಶಂಕರ್ ಗುರು–ಧನಂಜಯ ಕಾಂಬಿನೇಷನ್ನ ಎರಡನೇ ಸಿನಿಮಾ ಇದಾಗಿದ್ದು, ಆ್ಯಕ್ಷನ್ ಫ್ಯಾಮಿಲಿ ಎಂಟರ್ಟೈನರ್ ಜಾನರ್ನಲ್ಲಿ ಸಿನಿಮಾ ಕಥೆಯಿದೆ.

ಸಿನಿಮಾಗೆ ವಾಸುಕಿ ವೈಭವ್ ಸಂಗೀತ ನಿರ್ದೇಶನವಿದ್ದು, ‘ಏಕ್ ಲವ್ ಯಾ’, ‘ಯುಐ’ ಖ್ಯಾತಿಯ ರೀಷ್ಮಾ ನಾಣಯ್ಯ ನಾಯಕಿಯಾಗಿ ಧನಂಜಯ ಅವರಿಗೆ ಜೋಡಿಯಾಗಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-51-308763939

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.