ಗುರುವಾರ , ಸೆಪ್ಟೆಂಬರ್ 23, 2021
21 °C

ರಜನಿ ಫ್ಯಾನ್ಸ್‌ಗೆ ಗಣೇಶ ಹಬ್ಬದ ದಿನ ‘ಅಣ್ಣಾತ್ತೆ’ ಉಡುಗೊರೆ

ಪ್ರಜಾವಾಣಿ ವೆಬ್‌ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ಗಣೇಶ ಚತುರ್ಥಿ ಪ್ರಯುಕ್ತ ಸೂಪರ್‌ಸ್ಟಾರ್‌ ರಜನಿಕಾಂತ್ ಅಭಿನಯದ ‘ಅಣ್ಣಾತ್ತೆ‘ ಸಿನಿಮಾದ ಫಸ್ಟ್‌ ಲುಕ್ ಹಾಗೂ ಮೋಷನ್ ಫೋಸ್ಟರ್ ನಾಳೆ (ಸೆ.10) ಬಿಡುಗಡೆಯಾಗಲಿದೆ.

ಈ ವಿಷಯವನ್ನು ಚಿತ್ರ ನಿರ್ಮಾಣ ಸಂಸ್ಥೆ ಸನ್‌ ಫಿಕ್ಚರ್ಸ್‌ ಟ್ವಿಟರ್‌ನಲ್ಲಿ ತಿಳಿಸಿದೆ. ಬೆಳಿಗ್ಗೆ 6 ಕ್ಕೆ ಮೋಷನ್ ಫೋಸ್ಟರ್‌ ಬಿಡುಗಡೆಯಾಗಲಿದೆ. ನಂತರ 10 ಗಂಟೆಗೆ ಫಸ್ಟ್‌ ಲುಕ್ ಬಿಡುಗಡೆಯಾಗಲಿದೆ.

2020 ರಲ್ಲಿ ಎ.ಆರ್.ಮುರುಘದಾಸ್ ನಿರ್ದೇಶನದ ‘ದರ್ಬಾರ್‘ ಬಿಡುಗಡೆಯಾದ ನಂತರ ರಜನಿಕಾಂತ್ ಅವರ ಯಾವುದೇ ಸಿನಿಮಾಗಳು ಬಿಡುಗಡೆಯಾಗಿರಲಿಲ್ಲ. ಕೊರೊನಾ ಲಾಕ್‌ಡೌನ್ ಪರಿಣಾಮದಿಂದ 'ಅಣ್ಣಾತ್ತೆ' ಚಿತ್ರದ ಶೂಟಿಂಗ್ ಮೂರು ಬಾರಿ ಮುಂದಕ್ಕೆ ಹೋಗಿತ್ತು. ಅಲ್ಲದೇ ಒಂದು ಬಾರಿ ರಜನಿ ಅವರು ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಇದೀಗ ಶೂಟಿಂಗ್ ಮುಗಿಸಿರುವ ಚಿತ್ರತಂಡ ಬಿಡುಗಡೆಗೆ ಸಿದ್ದತೆ ಮಾಡಿಕೊಳ್ಳುತ್ತಿದೆ.

ನವೆಂಬರ್ 4 ರಂದು ದೀಪಾವಳಿ ಹಬ್ಬಕ್ಕೆ ‘ಅಣ್ಣಾತ್ತೆ' ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಸಿನಿಮಾವನ್ನು ಸನ್‌ ಪಿಕ್ಚರ್ಸ್‌ನ ಕಲಾನಿಧಿ ಮಾರನ್ ನಿರ್ಮಿಸುತ್ತಿದ್ದು, ನಿರ್ದೇಶಕ ಶಿವಾ ಅವರು ನಿರ್ದೇಶಿಸುತ್ತಿದ್ದಾರೆ. ನಯನತಾರಾ, ಕೀರ್ತಿ ಸುರೇಶ್, ಖುಷ್ಬೂ, ಮೀನಾ ಹಾಗೂ ಪ್ರಕಾಶ್ ರಾಜ್ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು