ಅಂಬಿ ಹುಟ್ಟುಹಬ್ಬಕ್ಕೆ ‘ಅಂತ’ ಉಡುಗೊರೆ

ಸೋಮವಾರ, ಮೇ 20, 2019
28 °C

ಅಂಬಿ ಹುಟ್ಟುಹಬ್ಬಕ್ಕೆ ‘ಅಂತ’ ಉಡುಗೊರೆ

Published:
Updated:
Prajavani

80ರ ದಶಕದಲ್ಲಿ ಕನ್ನಡ ಚಿತ್ರರಂಗದಲ್ಲಿ ಹೊಸ ದಾಖಲೆ ನಿರ್ಮಿಸಿದ ಚಿತ್ರ ‘ಅಂತ’. 1981ರಲ್ಲಿ ಬಿಡುಗಡೆಯಾಗಿದ್ದ ಈ ಚಿತ್ರವನ್ನು ಎಸ್.ವಿ. ರಾಜೇಂದ್ರ ಸಿಂಗ್ ಬಾಬು ನಿರ್ದೇಶಿಸಿದ್ದರು. ರೆಬೆಲ್‍ಸ್ಟಾರ್ ಅಂಬರೀಷ್ ಇನ್ಸ್‌ಪೆಕ್ಟರ್ ಸುಶೀಲ್‍ ಕುಮಾರ್ ಪಾತ್ರ ನಿಭಾಯಿಸಿದ್ದರು. ಅಲ್ಲದೆ, ಅವರು ಕನ್ವರ್‌ಲಾಲ್‌ ಪಾತ್ರವನ್ನೂ ಇದೇ ಸಿನಿಮಾದಲ್ಲಿ ನಿಭಾಯಿಸಿದ್ದರು.

‘ಪ್ರಜಾವಾಣಿ’ ಬಳಗದ ‘ಸುಧಾ’ ವಾರಪತ್ರಿಕೆಯಲ್ಲಿ ಪ್ರಕಟವಾದ ಎಚ್.ಕೆ. ಅನಂತರಾವ್ ಅವರ ಕಾದಂಬರಿಯನ್ನು ಆಧರಿಸಿ ನಿರ್ಮಾಣವಾದ ‘ಅಂತ’ ಸಿನಿಮಾ ಈಗ ಹೊಸ ತಂತ್ರಜ್ಞಾನವನ್ನು ಹೊದ್ದುಕೊಂಡು ಮೇ ತಿಂಗಳಲ್ಲಿ ತೆರೆಗೆ ಬರಲಿದೆ. ಮೇ ತಿಂಗಳಲ್ಲಿ ಅಂಬಿ ಹುಟ್ಟುಹಬ್ಬ ಕೂಡ ಇದೆ ಎನ್ನುವುದು ನೆನಪಿರಲಿ!

ಎಚ್.ಎನ್. ಮಾರುತಿ ಹಾಗೂ ವೇಣುಗೋಪಾಲ್ ಈ ಚಿತ್ರ ನಿರ್ಮಿಸಿದ್ದರು. ಇದರ ಚಿತ್ರಕಥೆಯನ್ನು ರಾಜೇಂದ್ರ ಸಿಂಗ್ ಬಾಬು ಅವರೇ ಸಿದ್ಧಪಡಿಸಿದ್ದರು. ಜಿ.ಕೆ. ವೆಂಕಟೇಶ್ ಅವರ ಸಂಗೀತ ಸಂಯೋಜನೆಯ ಈ ಚಿತ್ರದ ಮಧುರ ಹಾಡುಗಳನ್ನು ಗುನುಗಿಕೊಳ್ಳದೆ ಇರಲು ಇಂದಿಗೂ ಸಾಧ್ಯವಾಗಿಲ್ಲ!

ಹೊಸ ರೂಪದ ‘ಅಂತ’ ಚಿತ್ರವನ್ನು ರಾಜ್ಯದಾದ್ಯಂತ ಬಿಡುಗಡೆ ಮಾಡಲಾಗುವುದು ಎಂದು ನಿರ್ಮಾಪಕ ವೇಣುಗೋಪಾಲ್ ತಿಳಿಸಿದ್ದಾರೆ. ಈ ಚಿತ್ರದಲ್ಲಿ ಅಂಬಿ ಅವರಲ್ಲದೆ, ಲಕ್ಷ್ಮಿ, ಜಯಮಾಲಾ, ಲತಾ, ಪಂಡರೀಬಾಯಿ, ವಜ್ರಮುನಿ, ಪ್ರಭಾಕರ್, ಸುಂದರ ಕೃಷ್ಣ ಅರಸ್, ಶಕ್ತಿ ಪ್ರಸಾದ್, ಲಕ್ಷ್ಮಣ್, ಸಿ.ಸೀತಾರಾಮ್ ನಟಿಸಿದ್ದರು.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 4

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !