ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಾರಾವಜ್ರ’ ಸಿನಿಮಾ ಮೂಲಕ ಅನು ಕಮ್‌ಬ್ಯಾಕ್‌

Last Updated 19 ಫೆಬ್ರುವರಿ 2020, 19:30 IST
ಅಕ್ಷರ ಗಾತ್ರ

ಸಂಸಾರದ ಜವಾಬ್ದಾರಿಯ ಕಾರಣ ನಟನೆಗೆ ಕೆಲವು ವರ್ಷಗಳ ಬಿಡುವು ನೀಡಿದ್ದ ನಟಿ ಅನು ಪ್ರಭಾಕರ್, ಮತ್ತೆ ಪೂರ್ಣ ಪ್ರಮಾಣದಲ್ಲಿ ನಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಲೇಖಕಿ ಸಾರಾ ಅಬೂಬಕರ್‌ ಅವರ ಕಾದಂಬರಿ ಆಧಾರಿತ, ನಿರ್ದೇಶಕಿ ಆರ್ನಾ ಸಾಧ್ಯ (ಶ್ವೇತಾ ಶೆಟ್ಟಿ) ಆ್ಯಕ್ಷನ್‌ ಕಟ್‌ ಹೇಳಿರುವ‘ಸಾರಾವಜ್ರ’ ಸಿನಿಮಾದಲ್ಲಿ ಪಾತ್ರ ಮಾಡುವ ಮೂಲಕನಟನೆಗೆ ಮರಳಿದ್ದಾರೆ. ಕಳೆದ ವರ್ಷ ’ಅನುಕ್ತಾ’ ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇ ಅವರ ಕೊನೆಯ ಸಿನಿಮಾ.

ಈ ಕಾದಂಬರಿಯ ಜೀವಾಳ ‘ನಫಿಜಾ’ ಪಾತ್ರ. ಅದೇ ಪಾತ್ರದಲ್ಲಿ ಅನು ಮಿನುಗುವ ನಿರೀಕ್ಷೆ ಮೂಡಿಸಿದ್ದಾರೆ.‌ ಚಿತ್ರವು ಡಬ್ಬಿಂಗ್‌ ಹಂತದಲ್ಲಿದೆ. ಸದ್ಯದಲ್ಲೇ ಚಿತ್ರದ ಒಂಬತ್ತು ಹಾಡುಗಳು ಬಿಡುಗಡೆಯಾಗುವ ನಿರೀಕ್ಷೆ ಇದೆ.

ಬಾಲನಟಿಯಾಗಿ ಕನ್ನಡ ಚಿತ್ರರಂಗ ಪ್ರವೇಶಿ ಸಿದ ಅನು ಪ್ರಭಾಕರ್‌ ಎರಡು ದಶಕಗಳಲ್ಲಿ ಸುಮಾರು 80 ಚಿತ್ರಗಳಲ್ಲಿ ನಟಿಸಿದ್ದಾರೆ. ನಟ ರಘುಮುಖರ್ಜಿಯವರನ್ನು ಕೈಹಿಡಿದಿರುವ ಅವರಿಗೆ ಒಂದೂವರೆ ವರ್ಷದ ಮಗಳು ಇದ್ದಾಳೆ. ತಾಯ್ತನದ ಖುಷಿಯಲ್ಲಿರುವ ಅವರಿಗೆ, ಈಗ ಬ್ಯಾರಿ ಕುಟುಂಬವೊಂದರ ಕಥೆ ಹೇಳುವ ನಫಿಜಾ ಪಾತ್ರಕ್ಕೆ ಜೀವ ತುಂಬಿರುವ ಸಮಾಧಾನವೂ ಇದೆ.

‘ಖ್ಯಾತ ಲೇಖಕಿಯ ಕಾದಂಬರಿಯ ಕಥಾವಸ್ತುವಿಗೆ ನಟನೆಯ ಮೂಲಕ ನ್ಯಾಯ ಸಲ್ಲಿಸಲು ಸಾಧ್ಯವೇ ಎನ್ನುವ ಅಳುಕು ಆರಂಭದಲ್ಲಿತ್ತು. ಆದರೆ, ಇಂತಹ ಪಾತ್ರವೊಂದು ವೃತ್ತಿ ಬದುಕಿನಲ್ಲಿ ಸಿಗುತ್ತಿರುವುದು ಸೌಭಾಗ್ಯವೇ ಸರಿ ಎಂದು ಪಾತ್ರ ಒಪ್ಪಿಕೊಂಡೆ’ ಎಂದು ಅನುಪ್ರಭಾಕರ್‌ ಸುದ್ದಿಗೋಷ್ಠಿಯಲ್ಲಿ ಹೇಳಿಕೊಂಡರು.

ಈ ಚಿತ್ರದಲ್ಲಿ ಪೋಷಕ ನಟರಾಗಿ ಕಾಣಿಸಿ ಕೊಂಡಿರುವ ಹಿರಿಯ ನಟ ರಮೇಶ್‌ ಭಟ್‌, ಸಿನಿಮಾ ಮೂಲಕ ಕಾದಂಬರಿಗೆ ನ್ಯಾಯ ಕೊಡು ವುದು ಕಷ್ಟದ ಕೆಲಸ. ಅದನ್ನು ನಿರ್ದೇಶಕಿ ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಈ ಚಿತ್ರವು ಕನ್ನಡ ಚಿತ್ರರಂಗಕ್ಕೆ ಅತ್ಯುತ್ತಮ ಕೊಡುಗೆ ಎನಿಸಲಿದೆ’ ಎಂದರು.

ನಟ, ನಿರೂಪಕರೆಹಮಾನ್ ಹಾಸನ್, ಈ ಚಿತ್ರದಲ್ಲಿ ಬದ್ರುದ್ದಿನ್ ಪಾತ್ರ ನಿಭಾಯಿಸಿದ್ದಾರೆ.

ದೇವೇಂದ್ರ ರೆಡ್ಡಿ ಸಂಭ್ರಮ ಡ್ರೀಮ್ ಹೌಸ್ ಲಾಂಛನದಡಿ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಚಿತ್ರಕಥೆ ನರೇಂದ್ರ ಬಾಬು,ಸಾಹಿತ್ಯ ಪತ್ರಕರ್ತ ಬಿ.ಎಂ. ಹನೀಫ್‌, ಛಾಯಾಗ್ರಹಣ ಪರಂ ಅವರದ್ದು. ಒಂಬತ್ತು ಹಾಡುಗಳಿಗೆ ವಿ. ಮನೋಹರ್‌ ಅವರ ಸಂಗೀತ ಸಂಯೋಜನೆ ಇದೆ. ತಾರಾಗಣದಲ್ಲಿ ರಮೇಶ್‌ ಭಟ್‌, ಸುಧಾ ಬೆಳವಾಡಿ, ಪುನೀತ್‌ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT