ಬುಧವಾರ, ಆಗಸ್ಟ್ 17, 2022
23 °C

ಈ ಮಳೆ ನೋಡಿ ನರ್ಸರಿ ರೈಮ್ಸ್ ನೆನಪಾಗುತ್ತಿದೆ: ಅನುಷ್ಕಾ ಶರ್ಮಾ

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

Anushka Sharma Instagram

ಬೆಂಗಳೂರು: ಇಂಗ್ಲೆಂಡ್‌ನಲ್ಲಿ ಭಾರಿ ಮಳೆಯಿಂದಾಗಿ ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯ ಆರಂಭವು ವಿಳಂಬವಾಗಿದೆ.

ಬಿಡದೆ ಸುರಿಯುತ್ತಿರುವ ಮಳೆಯ ಕುರಿತು ಕ್ರಿಕೆಟ್ ಅಭಿಮಾನಿಗಳು ಖೇದ ವ್ಯಕ್ತಪಡಿಸಿದರೆ, ಟೀಮ್ ಇಂಡಿಯಾ ಕ್ಯಾಪ್ಟನ್ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಕೂಡ ಬೇಸರ ವ್ಯಕ್ತಪಡಿಸಿದ್ದಾರೆ.

ಅನುಷ್ಕಾ ಶರ್ಮಾ, ಕೊಹ್ಲಿ ಜತೆಗೆ ಇಂಗ್ಲೆಂಡ್‌ಗೆ ತೆರಳಿದ್ದು, ಏಜಿಸ್ ಬೌಲ್ ಸ್ಟೇಡಿಯಂನಲ್ಲಿ ಕ್ವಾರಂಟೈನ್‌ನಲ್ಲಿದ್ದಾರೆ. ಮಳೆಯ ಕುರಿತು ಅವರು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ನರ್ಸರಿ ಶಾಲೆಯ ರೈನ್ ರೈನ್ ಗೋ ಎವೇ..! ಕಮ್ ಎಗೈನ್ ಆಫ್ಟರ್ 5 ಡೇಯ್ಸ್ ಎಂದು ಸ್ಟೋರೀಸ್‌ನಲ್ಲಿ ಸ್ಟೇಟಸ್ ಪೋಸ್ಟ್ ಮಾಡಿದ್ದಾರೆ.


ರೈನ್ ರೈನ್ ಗೋ ಎವೇ..

ಒಂದೆಡೆ ಮಳೆಯಿಂದಾಗಿ ಪಂದ್ಯಕ್ಕೆ ಅಡಚಣೆಯಾದ ಕುರಿತು ಮೀಮ್ಸ್ ಹರಿದಾಡುತ್ತಿದ್ದರೆ, ಮತ್ತೊಂದೆಡೆ ಅನುಷ್ಕಾ ಕೂಡ ಮಳೆ ಹೋಗಲಿ ಎಂದು ಕೇಳಿಕೊಂಡಿದ್ದು, ಕ್ರಿಕೆಟ್ ಪಂದ್ಯ ನಡೆಯಲಿ ಎನ್ನುವುದು ಅಭಿಮಾನಿಗಳ ಹಾರೈಕೆಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು