ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಲಿದೆ ಕ್ರಿಕೆಟರ್ ಜೂಲನ್ ಗೋಸ್ವಾಮಿ ಬಯೋಪಿಕ್‌

Last Updated 6 ಜನವರಿ 2022, 8:59 IST
ಅಕ್ಷರ ಗಾತ್ರ

ನವದೆಹಲಿ: ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅಭಿನಯದ ‘ಚಕ್ಡಾ ಎಕ್ಸ್‌ಪ್ರೆಸ್’ ಸಿನಿಮಾ ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಘೋಷಿಸಿದೆ.

ಭಾರತ ಮಹಿಳಾ ಕ್ರಿಕೆಟ್‌‌ ತಂಡದ ಮಾಜಿ ನಾಯಕಿ ಜೂಲನ್ ಗೋಸ್ವಾಮಿ ಬಯೋಪಿಕ್‌ ಇದಾಗಿದ್ದು, ಕ್ರೀಡಾಭಿಮಾನಿಗಳಲ್ಲಿ ಭಾರಿ ನಿರೀಕ್ಷೆ ಮೂಡಿಸಿದೆ.

ಈ ಚಿತ್ರವನ್ನು ಪ್ರೊಸಿತ್ ರಾಯ್ ನಿರ್ದೇಶನ ಮಾಡುತ್ತಿದ್ದು, ಕ್ಲೀನ್ ಸ್ಲೇಟ್ ಫಿಲಂಸ್‌ ನಿರ್ಮಾಣ ಮಾಡುತ್ತಿದೆ.

ಟ್ವಿಟರ್‌ನಲ್ಲಿ ಚಿತ್ರದ ಪೋಸ್ಟರ್‌ ಬಿಡುಗಡೆ ಮಾಡಿರುವ ಅನುಷ್ಕಾ, ‘ಇದು ನಿಜವಾಗಿಯೂ ವಿಶೇಷವಾದ ಚಿತ್ರ. ಯಾಕೆಂದರೆ ಇದು ಅದ್ಭುತ ತ್ಯಾಗದ ಕಥೆಯಾಗಿದೆ. ‘ಚಕ್ಡಾ ಎಕ್ಸ್‌ಪ್ರೆಸ್’ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕಿ ಜೂಲನ್ ಗೋಸ್ವಾಮಿ ಅವರ ಜೀವನ ಪ್ರೇರಿತವಾಗಿದೆ. ಜೂಲನ್‌ ಕ್ರಿಕೆಟ್‌ ಆಟಗಾರ್ತಿಯಾಗಲು ಮತ್ತು ಜಾಗತಿಕ ವೇದಿಕೆಯಲ್ಲಿ ತನ್ನ ದೇಶವು ಹೆಮ್ಮೆಪಡುವಂತೆ ಮಾಡಲು ನಿರ್ಧರಿಸಿದ ಸಮಯದಲ್ಲಿ, ಕ್ರೀಡೆಯನ್ನು ಆಡುವ ಬಗ್ಗೆ ಯೋಚಿಸುವುದು ಮಹಿಳೆಯರಿಗೆ ತುಂಬಾ ಕಠಿಣವಾಗಿತ್ತು. ಈ ಚಿತ್ರವು ಆಕೆಯ ಜೀವನವನ್ನು ಮತ್ತು ಮಹಿಳಾ ಕ್ರಿಕೆಟ್ ಅನ್ನು ರೂಪಿಸಿದ ನಿದರ್ಶನಗಳನ್ನು ತೋರಿಸುತ್ತದೆ' ಎಂದು ಬರೆದುಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT