ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ಕಾಂತಾರ’ ನೋಡಿ ಅನುಷ್ಕಾ ಫಿದಾ: ರಿಷಬ್ ಶೆಟ್ಟಿಯನ್ನು ಕೊಂಡಾಡಿದ ಬಾಹುಬಲಿ ನಟಿ

Last Updated 16 ಅಕ್ಟೋಬರ್ 2022, 11:31 IST
ಅಕ್ಷರ ಗಾತ್ರ

‌ಹೈದರಾಬಾದ್: ನಟ ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ‘ಕಾಂತಾರ’ ಸಿನಿಮಾಕ್ಕೆ ಕನ್ನಡ ಸೇರಿದಂತೆ ತೆಲುಗು, ತಮಿಳು, ಹಿಂದಿಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕಾಂತಾರ ಸಿನಿಮಾ ನೂರಾರು ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಪರ ಭಾಷಾ ನಟ –ನಟಿಯರು ಸೇರಿದಂತೆ ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ.

ಓದಿ...ತೆಲುಗಿನಲ್ಲಿ ‘ಕಾಂತಾರ’ ಅಬ್ಬರ: ಟ್ವಿಟರ್‌ನಲ್ಲಿ ಟ್ರೆಂಡ್ ಆಯ್ತು #KantaraTelugu

ಇದೀಗ ತೆಲುಗಿನ ಸ್ಟಾರ್‌ ನಟಿ, ಕನ್ನಡತಿ ಅನುಷ್ಕಾ ಶೆಟ್ಟಿ ಅವರಿಗೂ ‘ಕಾಂತಾರ’ ಸಖತ್​ ಇಷ್ಟವಾಗಿದೆ. ಸಿನಿಮಾ ವೀಕ್ಷಿಸಿದ ಬಳಿಕ ಅವರು ಫೇಸ್‌ಬುಕ್‌ನಲ್ಲಿ ಅಭಿಪ್ರಾಯ ತಿಳಿಸಿದ್ದಾರೆ.

‘ಕಾಂತಾರ’ ಸಿನಿಮಾ ನೋಡಿದೆ. ಪೂರ್ತಿಯಾಗಿ ಈ ಚಿತ್ರ ನನಗೆ ಇಷ್ಟ ಆಯ್ತು. ಪ್ರತಿಯೊಬ್ಬ ಕಲಾವಿದರು, ತಂತ್ರಜ್ಞರು, ನಿರ್ಮಾಪಕರು ಸೇರಿ ಇಡೀ ತಂಡಕ್ಕೆ ಅಭಿನಂದನೆಗಳು. ಈ ಅನುಭವ ನೀಡಿದ್ದಕ್ಕಾಗಿ ಧನ್ಯವಾದಗಳು. ರಿಷಬ್​ ಶೆಟ್ಟಿ ನೀವು ಅಮೇಜಿಂಗ್​. ಎಲ್ಲವೂ ಈ ಸಿನಿಮಾವನ್ನು ಚಿತ್ರಮಂದಿರದಲ್ಲೇ ನೋಡಿ’ ಎಂದು ಅನುಷ್ಕಾ ಕೊಂಡಾಡಿದ್ದಾರೆ.

‘ಕಾಂತಾರ’, ಮನುಷ್ಯ ಮತ್ತು ಪ್ರಕೃತಿಯ ನಡುವಿನ ಸಂಘರ್ಷದ ಕಥೆಯಾಗಿದ್ದು, ರಿಷಬ್‌ ಶೆಟ್ಟಿ ನಟಿಸಿ, ನಿರ್ದೇಶಿಸಿದ್ದಾರೆ. ಈ ಚಿತ್ರದಲ್ಲಿ ರಿಷಬ್‌ ಶೆಟ್ಟಿ ಜೊತೆಗೆ ಸಪ್ತಮಿ ಗೌಡ, ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ ಸೇರಿದಂತೆ ಹಲವು ಪ್ರತಿಭಾವಂತ ಕಲಾವಿದರು ನಟಿಸಿದ್ದಾರೆ. ಹೊಂಬಾಳೆ ಫಿಲಂಸ್‌ ಚಿತ್ರವನ್ನು ನಿರ್ಮಿಸಿದೆ. ಚಿತ್ರಕ್ಕೆ ಅಜನೀಶ್ ಲೋಕನಾಥ್ ಅವರ ಸಂಗೀತ ಮತ್ತು ಅರವಿಂದ್ ಕಶ್ಯಪ್ ಛಾಯಾಗ್ರಹಣವಿದೆ.

ಇವನ್ನೂ ಓದಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT