ಶನಿವಾರ, ಮಾರ್ಚ್ 28, 2020
19 °C
ಕ್ರಿಕೆಟಿಗನ ಜೊತೆ ಮದುವೆ

ಗಾಳಿ ಸುದ್ದಿಗಳಿಗೆ ತೆರೆ: ಮನೆಯವರು ನೋಡಿದ ಹುಡುಗನ ವರಿಸುವೆ –ಅನುಷ್ಕಾ ಶೆಟ್ಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೈದರಾಬಾದ್‌: ದಕ್ಷಿಣ ಭಾರತದ ಖ್ಯಾತ ನಟಿ ಹಾಗೂ ಕರಾವಳಿ ಕುವರಿ ಅನುಷ್ಕಾ ಶೆಟ್ಟಿ ಸುತ್ತ ಹರಿದಾಡುತ್ತಿದ್ದ ಗಾಳಿ ಸುದ್ದಿಗಳಿಗೆ ಸ್ವತಃ ಅವರೇ ತೆರೆ ಎಳೆದಿದ್ದಾರೆ.

ಹೈದರಾಬಾದ್‌ನಲ್ಲಿ ನಟ ನಾನಿ ಸಿನಿಮಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅನುಷ್ಕಾ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡುವ ಮೂಲಕ ತಮ್ಮ ಸುತ್ತ ಹರಡಿದ್ದ ಎಲ್ಲಾ ಗಾಳಿ ಸುದ್ದಿಗಳಿಗೂ ತೆರೆ ಎಳೆದಿದ್ದಾರೆ.

ಅನುಷ್ಕಾ ಶೆಟ್ಟಿ ಭಾರತ ಕ್ರಿಕೆಟ್‌ ತಂಡದ ಆಟಗಾರನ ಜೊತೆ ಡೇಟಿಂಗ್‌ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಡಿತ್ತು. ಇನ್ನು ಕೆಲವೇ ದಿನಗಳಲ್ಲಿ ಇವರು ಮದುವೆಯಾಗಲಿದ್ದಾರೆ ಎಂಬ ವದಂತಿಯೂ ಇತ್ತು. ಆದರೆ ಕ್ರಿಕೆಟ್‌ ಆಟಗಾರ ಯಾರು ಎಂಬುದು ಮಾತ್ರ ಇಲ್ಲಿಯವರೆಗೂ ಬಹಿರಂಗವಾಗಿಲ್ಲ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಅವರು ಅವೆಲ್ಲಾ ಗಾಳಿ ಸುದ್ದಿಗಳು ಮತ್ತು ರಬ್ಬಿಶ್‌, ಮನೆಯವರು ನೋಡಿದ ಹುಡುಗನನ್ನು ಮದುವೆಯಾಗುವೇ ಎಂದು ಹೇಳುವ ಮೂಲಕ ಗಾಸಿಪ್‌ಗಳಿಗೆ ಫುಲ್‌ಸ್ಟಾಪ್‌ ಹಾಕಿದ್ದಾರೆ. 

ಈ ಹಿಂದೆ ತೆಲುಗಿನ ಬಾಹುಬಲಿ ಖ್ಯಾತಿಯ ಪ್ರಭಾಸ್ ಜೊತೆಯೂ ಅನುಷ್ಕಾ ಹೆಸರು ತಳುಕು ಹಾಕಿಕೊಂಡಿತ್ತು. ಈ ಜೋಡಿ ಮದುವೆಯಾಗಲಿದೆ ಎಂಬ ಸುದ್ದಿಗಳು ಇದ್ದವು. ಆಗಲೂ ಇಂತಹ ವದಂತಿಗಳನ್ನು ಅನುಷ್ಕಾ ತಳ್ಳಿಹಾಕಿದ್ದರು.

ಅನುಷ್ಕಾ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ನಿಶ್ಯಬ್ದಂ ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ. ಇನ್ನೂ 2 ಸಿನಿಮಾಗಳಲ್ಲಿ ಅನುಷ್ಕಾ ನಟಿಸುತ್ತಿದ್ದಾರೆ. ದಕ್ಷಿಣ ಭಾರತದಲ್ಲೇ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿಯಾಗಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು