ಬುಧವಾರ, ಮಾರ್ಚ್ 29, 2023
27 °C

40ನೇ ವಸಂತಕ್ಕೆ ಕಾಲಿಟ್ಟ ನಟಿ ಅನುಷ್ಕಾ: ಟ್ವಿಟರ್‌ನಲ್ಲಿ ಶುಭಾಶಯಗಳ ಮಹಾಪೂರ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಹೈದರಾಬಾದ್: ತೆಲುಗು ನಟಿ ಅನುಷ್ಕಾ ಶೆಟ್ಟಿ ಅವರು ಇಂದು (ಭಾನುವಾರ) 40ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಆ ಹಿನ್ನೆಲೆಯಲ್ಲಿ ಟ್ವಿಟರ್‌ನಲ್ಲಿ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.

ಅನುಷ್ಕಾ ಶೆಟ್ಟಿ ಹುಟ್ಟುಹಬ್ಬದ ಅಂಗವಾಗಿ ಅನೇಕ ಅಭಿಮಾನಿಗಳು ಟ್ವೀಟ್‌ ಮಾಡುವ ಮೂಲಕ ಶುಭ ಹಾರೈಸಿದ್ದಾರೆ.

ಅನುಷ್ಕಾ ಅವರು ‘ಸಿಂಗಂ’,  ‘ಅರುಂಧತಿ’, ‘ಬಾಹುಬಲಿ’ ಚಿತ್ರಗಳ ಮೂಲಕ ತೆಲುಗು ಚಿತ್ರರಂಗದಲ್ಲಿ ಹೆಚ್ಚು ಖ್ಯಾತಿ ಗಳಿಸಿದ್ದಾರೆ.

2020ರಲ್ಲಿ ಅಮೆಜಾನ್‌ ಪ್ರೈಮ್‌ನಲ್ಲಿ ತೆರೆಕಂಡ ‘ನಿಶಬ್ದಂ’ ಸಿನಿಮಾ ಬಳಿಕ ಅನುಷ್ಕಾ ಬೇರೆ ಯಾವುದೇ ಸಿನಿಮಾ ಒಪ್ಪಿಕೊಂಡಿರಲಿಲ್ಲ. ಆದರೆ, ಹುಟ್ಟುಹಬ್ಬದ ಅಂಗವಾಗಿ ಅವರು ಹೊಸ ಚಿತ್ರವನ್ನು ಘೋಷಣೆ ಮಾಡುವ ನಿರೀಕ್ಷೆಯಲ್ಲಿದ್ದಾರೆ ಅವರ ಅಭಿಮಾನಿಗಳು.

ಸೂಕ್ತ ಕತೆ ಸಿಕ್ಕಿದರೆ ಕನ್ನಡದಲ್ಲೂ ಅಭಿನಯಿಸುತ್ತೇನೆ ಎಂದಿರುವ ಅನುಷ್ಕಾ ಅವರ ಕನ್ನಡ ಸಿನಿಮಾ ಕನಸು ಇನ್ನೂ ನನಸಾಗಿಲ್ಲ. ಆದರೂ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಅವರು ಮರೆತಿಲ್ಲ ಎನ್ನುವುದಕ್ಕೆ ಅವರ ಪೋಸ್ಟ್‌ಗಳು ನಿದರ್ಶನ ಎನ್ನುವುದು ನೆಟ್ಟಿಗರ ಅಭಿಪ್ರಾಯ.

ನಟ ಪ್ರಭಾಸ್‌ –ಅನುಷ್ಕಾ ವಿವಾಹವಾಗಲಿದ್ದಾರೆ ಎಂಬ ವದಂತಿಗಳು ಹಲವು ಬಾರಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದವು. ಆದರೆ, ಈ ವಿಚಾರವಾಗಿ ಇಬ್ಬರೂ ಇದುವರೆಗೆ ಸ್ಪಷ್ಟನೆ ನೀಡಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು