ನಟಿ, ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ತಿಳಿದು ನೋವಾಯಿತು. ಸರ್ಕಾರಿ ಸಮಾರಂಭಗಳು ಸೇರಿದಂತೆ ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯಲ್ಲಿ ಅತ್ಯಂತ ಸೊಗಸಾಗಿ ನಿರೂಪಣೆ ಮಾಡುತ್ತಾ ನಾಡಿನ ಮನೆಮಾತಾಗಿದ್ದ ಬಹುಮುಖ ಪ್ರತಿಭೆಯೊಂದು ಬಹುಬೇಗ ನಮ್ಮನ್ನು ಅಗಲಿರುವುದು ದುಃಖದ ಸಂಗತಿ.
— Siddaramaiah (@siddaramaiah) July 11, 2024
ಮೃತ ಅಪರ್ಣಾಳ ಆತ್ಮಕ್ಕೆ ಶಾಂತಿ… pic.twitter.com/fZs9L6m42Q
ಸ್ಪಷ್ಟ ಕನ್ನಡದ ಮೂಲಕ ನಿರೂಪಣೆ ಮಾಡಿ ಕನ್ನಡಿಗರ ಮನ ಗೆದ್ದ, ಖ್ಯಾತ ನಿರೂಪಕಿ, ನಟಿ ಶ್ರೀಮತಿ ಅಪರ್ಣ ಅವರ ಸಾವಿನಿಂದ ಮನಸ್ಸಿಗೆ ಅಪಾರ ನೋವುಂಟಾಗಿದೆ. ಅವರ ನಿಧನವು ಕಲಾ ಲೋಕಕ್ಕೆ ತುಂಬಲಾರದ ನಷ್ಟ. ನಿರೂಪಕಿಯಾಗಿ, ನಟಿಯಾಗಿ ದಶಕಗಳಿಂದ ದುಡಿದ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬ ಹಾಗೂ ಸ್ನೇಹಿತರಿಗೆ ನನ್ನ… pic.twitter.com/EI2DBga1DW
— DK Shivakumar (@DKShivakumar) July 11, 2024
ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ಕೇಳಿ ಮನಸಿಗೆ ಅತ್ಯಂತ ನೋವಾಯಿತು. ಸರಳ ಕನ್ನಡದಲ್ಲಿ ಸುಂದರವಾಗಿ ಕಾರ್ಯಕ್ರಮಗಳನ್ನು ನಿರೂಪಣೆ ಮಾಡುವ ಮೂಲಕ ಎಲ್ಲರ ಮನೆ ಮಾತಾಗಿದ್ದರು. ಅವರ ಅಗಲಿಕೆಯಿಂದ ಕನ್ನಡ ನಾಡು ಒಬ್ಬ ಸಜ್ಜನಿಕೆಯ ನಿರೂಪಕಿಯನ್ನು ಕಳೆದುಕೊಂಡಂತಾಗಿದೆ.
— Basavaraj S Bommai (@BSBommai) July 11, 2024
ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಅಗಲಿಕೆಯ… pic.twitter.com/ZC3LpsepNO
ಕನ್ನಡಾಂಬೆ ನಿಜವಾದ ಕನ್ನಡತಿಯನ್ನ ಕಳೆದುಕೊಂಡು ಬಡವಾಗಿದೆ. ನಮ್ಮ
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) July 11, 2024
ಆರೋಗ್ಯ ಇಲಾಖೆಯ ಹಲವು ಜಾಗೃತಿ ಕಾರ್ಯಕ್ರಮಗಳಿಗೆ ಧ್ವನಿಯಾಗಿದ್ದ ಖ್ಯಾತ ನಿರೂಪಕಿ ಅಪರ್ಣಾ ಅವರ ಸಾವಿನ ಸುದ್ದಿ ತಿಳಿದು ಅತೀವ ದುಃಖವಾಯಿತು. ಅವರ ಆತ್ಮಕ್ಕೆ ಶಾಂತಿ ಸಿಗಲಿ.
ಓಂ ಶಾಂತಿ🙏🏻 pic.twitter.com/FUTxabjSSE
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.