ಸೋಮವಾರ, ಮಾರ್ಚ್ 20, 2023
30 °C

ಚಿತ್ರಮಂದಿರಗಳನ್ನು ತೆರೆಯಲು ಅನುಮತಿ ಕೋರಿ ಮುಖ್ಯಮಂತ್ರಿಗೆ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಲಾಕ್‌ಡೌನ್‌ ಸಡಿಲಿಕೆಯ ಮೂರನೇ ಹಂತದಲ್ಲೂ ಚಿತ್ರಮಂದಿರಗಳನ್ನು ತೆರೆಯಲು ಸರ್ಕಾರ ಅವಕಾಶ ನೀಡದ ಕಾರಣ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ನಿಯೋಗವು ಮಂಗಳವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚಿತ್ರಮಂದಿರಗಳ ಪುನರಾರಂಭ ಹಾಗೂ ಒಳಾಂಗಣ ಚಿತ್ರೀಕರಣಕ್ಕೆ ಅವಕಾಶ ಕೋರಿ ಮನವಿ ಸಲ್ಲಿಸಿದೆ.

‘ಕೋವಿಡ್‌–19 ಮೊದಲ ಹಾಗೂ ಎರಡನೇ ಅಲೆಯ ಸಂದರ್ಭದಲ್ಲಿ ಚಿತ್ರರಂಗವು ಸಾಕಷ್ಟು ಸಂಕಷ್ಟ ಅನುಭವಿಸಿದೆ. ಸುಮಾರು 1 ವರ್ಷ ಚಿತ್ರಮಂದಿರಗಳು ಸ್ಥಗಿತಗೊಂಡು ಆರ್ಥಿಕ ಸಮಸ್ಯೆ, ಸಂಕಷ್ಟಕ್ಕೆ ಸಿಲುಕಿದ್ದರೂ ಸರ್ಕಾರದಿಂದ ಯಾವುದೇ ರೀತಿಯ ಆರ್ಥಿಕ ಸಹಾಯ ದೊರಕಿಲ್ಲ’ ಎಂದು ಮಂಡಳಿಯ ಅಧ್ಯಕ್ಷ ಡಿ.ಆರ್‌.ಜೈರಾಜ್‌ ಅವರ ನೇತೃತ್ವದ ನಿಯೋಗವು ಮುಖ್ಯಮಂತ್ರಿಗಳಿಗೆ ನೀಡಿದ ಮನವಿಯಲ್ಲಿ ಉಲ್ಲೇಖಿಸಿದೆ.

‘ಇತ್ತೀಚೆಗೆ ನೆರೆ ರಾಜ್ಯಗಳಾದ ತೆಲಂಗಾಣ, ಆಂಧ್ರಪ್ರದೇಶ ಹಾಗೂ ಗುಜರಾತ್‌ನಲ್ಲಿ ಚಿತ್ರಮಂದಿರಗಳ ಪುನರಾರಂಭಕ್ಕೆ ಅವಕಾಶ ಕಲ್ಪಿಸಲಾಗಿದೆ. ಜೊತೆಗೆ ಗುಜರಾತ್‌ ಮತ್ತು ಇತರೆ ರಾಜ್ಯಗಳಲ್ಲಿ ಕೋವಿಡ್‌ನಿಂದ ಉಂಟಾದ ನಷ್ಟಕ್ಕೆ ಅಲ್ಲಿನ ಸರ್ಕಾರಗಳು ಚಿತ್ರಮಂದಿರಗಳಿಗೆ ವಿದ್ಯುತ್‌ ಶುಲ್ಕ, ನೀರಿನ ಶುಲ್ಕ ಮತ್ತು ಆಸ್ತಿ ತೆರಿಗೆಯಲ್ಲಿ ವಿನಾಯಿತಿ ನೀಡಿದೆ. ಆದ್ದರಿಂದ ನಮ್ಮ ಈ ಮನವಿಯನ್ನು ಪರಿಗಣಿಸಿ, ಕರ್ನಾಟಕ ರಾಜ್ಯದಾದ್ಯಂತ ಚಲನಚಿತ್ರಮಂದಿರಗಳನ್ನು ಪುನರಾರಂಭಗೊಳಿಸಲು ಹಾಗೂ ಒಳಾಂಗಣ ಚಿತ್ರೀಕರಣಕ್ಕೆ ಅವಕಾಶ ಮತ್ತು ಚಿತ್ರಮಂದಿರಗಳಿಗೆ ವಿದ್ಯುತ್‌ ಶುಲ್ಕ ಮತ್ತು ಆಸ್ತಿ ತೆರಿಗೆಯಲ್ಲಿ ಸಂಪೂರ್ಣ ವಿನಾಯಿತಿ ನೀಡುವ ಮೂಲಕ ಚಲನಚಿತ್ರೋದ್ಯಮವು ಉಳಿದು, ಬೆಳೆಯಲು ಸಹಕರಿಸಬೇಕು’ ಎಂದು ನಿಯೋಗವು ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು