ಅಪ್ಪುವಿನ ಕಟೌಟ್ ಡ್ಯಾನ್ಸ್

ಬೆಂಗಳೂರು: ಪುನೀತ್ ರಾಜ್‌ಕುಮಾರ್ ಅವರ ಕಟೌಟ್ ಡ್ಯಾನ್ಸ್ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಪುನೀತ್ ಅಭಿಮಾನಿಗಳು ಈ ಡ್ಯಾನ್ಸಿಂಗ್ ಕಟೌಟ್ ಅನ್ನು ನಿರ್ಮಾಣ ಮಾಡಿದ್ದಾರೆ. ಈ ಕಟೌಟ್ ಅನ್ನು ಯಾರು ನಿರ್ಮಾಣ ಮಾಡಿದ್ದಾರೆ ಎಂದು ನಿಖರವಾಗಿ ತಿಳಿದು ಬಂದಿಲ್ಲ.
ಅಪ್ಪು ಅಭಿಮಾನಿಗಳಂತೂ ಈ ವಿಡಿಯೊವನ್ನು ಶೇರ್ ಮಾಡುತ್ತಿದ್ದಾರೆ. ಕೆಲವರು ಇದು ಹೆಬ್ಬಾಳ ಫ್ಲೈಓವರ್ ಬಳಿ ಎಂದು ಇನ್ನು ಕೆಲವರು ನಾಗರಭಾವಿ ಫ್ಲೈಓವರ್ ಬಳಿ ಈ ಡ್ಯಾನ್ಸಿಂಗ್ ಕಟೌಟ್ ನಿರ್ಮಾಣ ಮಾಡಲಾಗಿದೆ ಎಂದು ಹೇಳುತ್ತಿದ್ದಾರೆ.
ನಟ, ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅವರು ತೀವ್ರ ಹೃದಯಾಘಾತಕ್ಕೆ ಒಳಗಾಗಿ ಶುಕ್ರವಾರ (ಅ.29ರಂದು) ನಿಧನರಾದರು. ಅವರಿಗೆ 46 ವರ್ಷ ವಯಸ್ಸಾಗಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.