ಗುರುವಾರ , ಮೇ 13, 2021
40 °C

ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ಕೆಜಿಎಫ್ ಖ್ಯಾತಿಯ ಅರ್ಚನಾ ಜೋಯಿಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕೆಜಿಎಫ್ ಚಿತ್ರದಲ್ಲಿ ಅಮ್ಮನ ಪಾತ್ರದ ಮೂಲಕ ಸಿನಿ ಪ್ರೇಕ್ಷಕರ ಮೆಚ್ಚುಗೆ ಪಡೆದಿದ್ದ ಅರ್ಚನಾ ಜೋಯಿಸ್, ಈಗ ಮತ್ತೊಮ್ಮೆ ತೆರೆಯ ಮೇಲೆ ಮಿಂಚಲು ಸದ್ದಿಲ್ಲದೆ ಸಜ್ಜಾಗಿದ್ದಾರೆ.

ಇ.ಕೆ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಜಿ.ಗಂಗಾಧರ್ ಅವರ ನಿರ್ಮಾಣದ ಹೊಸ ಚಿತ್ರ ‘#ಮ್ಯೂಟ್’ ನಲ್ಲಿ ಅರ್ಚನಾ ಮುಖ್ಯ ಪಾತ್ರದಲ್ಲಿ ನಟಿಸಿದ್ದಾರೆ. ಜಿ.ಗಂಗಾಧರ್ ಅವರು ಮುಂಗಾರುಮಳೆ ಹಾಗೂ ಮೊಗ್ಗಿನಮನಸು ಚಿತ್ರಗಳಲ್ಲೂ ಎಕ್ಸಿಕ್ಯುಟಿವ್ ಪ್ರೊಡ್ಯೂಸರ್ ಆಗಿ ಕೆಲಸ ಮಾಡಿದ್ದರು. ಮುಂಗಾರುಮಳೆ 2 ಚಿತ್ರದಲ್ಲಿ ನಿರ್ದೇಶಕ ಶಶಾಂಕ್ ಅವರೊಂದಿಗೆ ಕೆಲಸ ಮಾಡಿದ್ದ ಪ್ರಶಾಂತ್ ಚಂದ್ರ ಅವರ ನಿರ್ದೇಶನದಲ್ಲಿ ಈ ಸಿನಿಮಾ ಚಿತ್ರೀಕರಣವನ್ನೂ ಪೂರ್ಣಗೊಳಿಸಿದೆ.


ಜಿ.ಗಂಗಾಧರ್

ಚಿತ್ರವು ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದ್ದು, ಈ ಸಿನಿಮಾದ ಶೀರ್ಷಿಕೆಯನ್ನು ನಟ ರಿಷಿ ಇತ್ತೀಚೆಗೆ ಬಿಡುಗಡೆಗೊಳಿಸಿದರು. ವಿಶೇಷವೆಂದರೆ ಈ ಸಿನಿಮಾದಲ್ಲಿ ತಮಿಳಿನ ಪ್ರಖ್ಯಾತ ನಟ ಆಡುಕಲಂ ನರೇನ್ ನಟಿಸಿದ್ದಾರೆ. ಸಿದ್ದಾರ್ಥ್ ಮಾಧ್ಯಮಿಕ ಕೂಡ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾ ಆಗಿರುವುದರಿಂದ ಪಾತ್ರಗಳ ಬಗ್ಗೆ ಸಿನಿಮಾ ತಂಡ ಯಾವುದೇ ಗುಟ್ಟು ಬಿಟ್ಟುಕೊಟ್ಟಿಲ್ಲ.

‘ನಿರ್ದೇಶಕನಾಗಿ ಇದು ನನಗೆ ಚೊಚ್ಚಲ ಚಿತ್ರ. ಸಿನಿಮಾದ ಕಥೆ ವಿಭಿನ್ನವಾಗಿದೆ. ಥ್ರಿಲ್ಲರ್ ಸಿನಿಮಾ ಆಗಿರುವುದರಿಂದ ಸಾಕಷ್ಟು ತಿರುವುಗಳು ಚಿತ್ರದಲ್ಲಿವೆ’ ಎನ್ನುತ್ತಾರೆ ನಿರ್ದೇಶಕ ಪ್ರಶಾಂತ್ ಚಂದ್ರ.


ಪ್ರಶಾಂತ್ ಚಂದ್ರ

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು