ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಶ್ಚಿತಾರ್ಥ ಮಾಡಿಕೊಂಡರೇ ನಟಿ ಅದಿತಿ ಪ್ರಭುದೇವ?

Last Updated 27 ಡಿಸೆಂಬರ್ 2021, 12:47 IST
ಅಕ್ಷರ ಗಾತ್ರ

ಬೆಂಗಳೂರು: ಚಂದನವನದ ಬೇಡಿಕೆಯ ನಟಿ ಅದಿತಿ ಪ್ರಭುದೇವ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂನಲ್ಲಿಅದಿತಿಫೋಟೊವನ್ನು ಹಂಚಿಕೊಂಡಿದ್ದಾರೆ. ಫೋಟೊದ ಜತೆಯಲ್ಲಿ‘ಒಂದು ಕನಸಿನಂತೆ ಈ ಕನಸು ನಿಜವಾಗಿದೆ’ ಎಂದು ಬರೆದುಕೊಂಡಿದ್ದಾರೆ. ಆದರೆ ಅವರು ನಿಶ್ಚಿತಾರ್ಥದ ವಿಷಯವನ್ನು ಹಂಚಿಕೊಂಡಿಲ್ಲ

ಅದಿತಿ, ಹುಡಗನೊಬ್ಬನ ಜತೆ ಇರುವ ಫೋಟೋ ಹಾಕಿದ್ದಾರೆ. ಅದರಲ್ಲಿ ಅವರು ಹಾಕಿರುವ ಉಂಗುರ ಹೈಲೈಟ್​ ಆಗಿದೆ. ಈ ಕಾರಣಕ್ಕೆ ಅಭಿಮಾನಿಗಳು ಸೇರಿದಂತೆ ಹಲವರುಶುಭಾಶಯಗಳನ್ನುಹೇಳುತ್ತಿದ್ದಾರೆ. ಇದರ ಬಗ್ಗೆ ಅದಿತಿಯ ಆಪ್ತರು, ಗೆಳೆಯರು ಹಾಗೂ ಕುಟುಂಬದವರು ಯಾವುದೇ ಮಾಹಿತಿ ನೀಡಿಲ್ಲ.

ಭಾನುವಾರ (ಡಿಸೆಂಬರ್​ 26) ಅದಿತಿ ಅವರು ಹೊಳೆನರಸೀಪುರದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.ಹುಡುಗ ಉದ್ಯಮಿಯಾಗಿದ್ದು ದಾವಣಗೆರೆ ಮೂಲದವರು ಎನ್ನಲಾಗಿದೆ.

ಇತ್ತೀಚೆಗೆ ಅದಿತಿ ನಟನೆಯ ‘ಆನ’ ಸಿನಿಮಾ ಬಿಡುಗಡೆಯಾಗಿ ಮಿಶ್ರ ಪ್ರತಿಕ್ರಿಯೆ ಪಡೆದಿದೆ. ಅವರ ಇನ್ನು ಎರಡುಸಿನಿಮಾಗಳು ಬಿಡುಗಡೆಗೆ ಸಿದ್ಧವಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT