ಭಾನುವಾರ, ಆಗಸ್ಟ್ 18, 2019
24 °C

ಅರ್ಜುನ್‌ ಗೌಡನ ಆರ್ಭಟ

Published:
Updated:
Prajavani

ನಿರ್ಮಾಪಕ ರಾಮು ಬಂಡವಾಳ ಹೂಡಿರುವ ‘ಅರ್ಜುನ್ ಗೌಡ’ ಸಿನಿಮಾದ ಟೀಸರ್ ಬಿಡುಗಡೆಯು ಆಗಸ್ಟ್ 2ರಂದು ನಡೆಯಲಿದೆ.  ಪ್ರಜ್ವಲ್ ದೇವರಾಜ್‌ ಈ ಚಿತ್ರದ ನಾಯಕ. ಬೆಂಗಳೂರು, ಮೈಸೂರು, ಮಂಗಳೂರು, ಕಾರವಾರದ ಸುತ್ತಮುತ್ತ ಶೂಟಿಂಗ್‌ ನಡೆಸಲಾಗಿದ್ದು, ಮುಕ್ಕಾಲು ಭಾಗದಷ್ಟು ಮುಗಿದಿದೆ. ವಿದೇಶದಲ್ಲಿ ನಡೆಯಬೇಕಿರುವ ಭಾಗದ ಚಿತ್ರೀಕರಣ ಮಾತ್ರ ಬಾಕಿ ಉಳಿದಿದೆ.

ಶಂಕರ್ ರಚನೆ ಹಾಗೂ ನಿರ್ದೇಶನದ ಈ ಚಿತ್ರಕ್ಕೆ ಧರ್ಮವಿಶ್ ಅವರ ಸಂಗೀತ ಸಂಯೋಜಿಸಿದ್ದಾರೆ. ಛಾಯಾಗ್ರಹಣ ಜೈಆನಂದ್ ಅವರದು. ಮಾಸ್ ಮಾದ ಅವರ ಸಾಹಸ ನಿರ್ದೇಶನ ನೀಡಿದ್ದಾರೆ.

ಪ್ರಿಯಾಂಕಾ ತಿಮ್ಮೇಶ್, ಸಾಧುಕೋಕಿಲ, ರೇಖಾ, ಕಡ್ಡಿಪುಡಿ ಚಂದ್ರು, ಅರವಿಂದ್, ದೀಪಕ್ ಶೆಟ್ಟಿ, ಪ್ರಕಾಶ್, ಯಮುನ ಶ್ರೀನಿಧಿ, ಭಜರಂಗಿ ಚೇತನ್, ಜೀವ, ಸೂರಜ್, ದಿನೇಶ್ ಮಂಗಳೂರು, ಹನುಮಂತೇಗೌಡ ತಾರಾಗಣದಲ್ಲಿದ್ದಾರೆ.

Post Comments (+)