ಬುಧವಾರ, ನವೆಂಬರ್ 25, 2020
18 °C

ಪ್ರಜ್ವಲ್ ದೇವರಾಜ್ ನಾಯಕ ನಟನಾಗಿರುವ ಅರ್ಜುನ್‌ಗೌಡ ಚಿತ್ರೀಕರಣ, ಡಬ್ಬಿಂಗ್ ಪೂರ್ಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

‘ಡೈನಾಮಿಕ್ ಪ್ರಿನ್ಸ್‌’ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸಿರುವ ‘ಅರ್ಜುನ್‌ಗೌಡ’ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದ್ದು, ಡಬ್ಬಿಂಗ್ ಸಹ ಪೂರೈಸಿದೆ.

ಲಕ್ಕಿ ಶಂಕರ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ಈ ಚಿತ್ರ ನಿರ್ದೇಶಿಸುತ್ತಿದ್ದಾರೆ.

ಈ ಚಿತ್ರದಲ್ಲಿ ಏಳು ಸಾಹಸ ಸನ್ನಿವೇಶಗಳಿದ್ದು, ಮಾಸ್ ಮಾದ ಅವರ ಸಾಹಸ ನಿರ್ದೇಶನವಿದೆ. ಈಗಾಗಲೇ ಈ ಚಿತ್ರದ ಆ್ಯಕ್ಷನ್ ಟ್ರೇಲರ್ ಬಿಡುಗಡೆಯಾಗಿದ್ದು, ಸಿನಿರಸಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಅನ್ಯ ಭಾಷೆಯ ವಿತರಕರು ಹಾಗೂ ನಿರ್ಮಾಪಕರಿಂದಲೂ ಆ್ಯಕ್ಷನ್ ಟ್ರೇಲರ್‌ಗೆ ಪ್ರಶಂಸೆ ಸಿಕ್ಕಿರುವುದು ಚಿತ್ರತಂಡದ ಸಂತಸವನ್ನು ದ್ವಿಗುಣಗೊಳಿಸಿದೆ.

ಕೊರೊನಾ ಹಾವಳಿ ಇಲ್ಲದೇ ಹೋಗಿದ್ದರೆ, ಈ ಚಿತ್ರ ಏಪ್ರಿಲ್‌ನಲ್ಲಿ ಬಿಡುಗಡೆಯಾಗಬೇಕಿತ್ತು. ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಈ ಸಿನಿಮಾವನ್ನು ನಿಗದಿತ ಸಮಯ ನೋಡಿಕೊಂಡು ಬಿಡುಗಡೆ ಮಾಡಲಾಗುವುದು. ಸದ್ಯದಲ್ಲೇ ಮೇಕಿಂಗ್ ಟ್ರೇಲರ್ ಬಿಡುಗಡೆ ಮಾಡುತ್ತೇವೆ ಎಂದು ನಿರ್ದೇಶಕರು ತಿಳಿಸಿದ್ದಾರೆ.

ನಾಯಕಿಯಾಗಿ ಪ್ರಿಯಾಂಕ ತಿಮ್ಮೇಶ್ ಅಭಿನಯಿಸಿದ್ದಾರೆ. ಬಾಲಿವುಡ್ ನಟ ರಾಹುಲ್ ದೇವ್, ಸ್ಪರ್ಶ ರೇಖಾ, ಸಾಧುಕೋಕಿಲ, ಕಡ್ಡಿಪುಡಿ ಚಂದ್ರು, ದೀಪಕ್ ಶೆಟ್ಟಿ, ದಿನೇಶ್ ಮಂಗಳೂರು, ಶೋಭಿತ್, ಜೀವನ್, ಹನುಮಂತೇಗೌಡ, ಮೋಹನ್ ಜುನೇಜ ಅವರ ತಾರಾಬಳಗವಿದೆ. ಕವಿರಾಜ್, ರಾಘವೇಂದ್ರ ಕಾಮತ್, ಶಂಕರ್‌ ಹಾಡುಗಳಿಗೆ ಸಾಹಿತ್ಯ ಬರೆದಿದ್ದು, ಧರ್ಮವಿಶ್ ಸಂಗೀತ ನೀಡಿದ್ದಾರೆ. ಜೈ ಆನಂದ್ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಈಶ್ವರಿ ಕುಮಾರ್ ಕಲಾ ನಿರ್ದೇಶನ ಹಾಗೂ ಮೋಹನ್, ಕಂಬಿ‌ರಾಜು ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.

ಅದ್ದೂರಿ ಚಿತ್ರಗಳ ನಿರ್ಮಾಣಕ್ಕೆ ಹೆಸರಾದ ನಿರ್ಮಾಪಕ ರಾಮು ಅವರು ರಾಮು ಫಿಲಂಸ್ ಲಾಂಛನದಲ್ಲಿ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.