ಲೈಂಗಿಕ ಕಿರುಕುಳ ಆರೋಪ ಪ್ರಕರಣ: ಅರ್ಜುನ್ ಸರ್ಜಾ ಬಂಧನ ಬೇಡ– ಆದೇಶ ಪುನಃ ವಿಸ್ತರಣೆ

7

ಲೈಂಗಿಕ ಕಿರುಕುಳ ಆರೋಪ ಪ್ರಕರಣ: ಅರ್ಜುನ್ ಸರ್ಜಾ ಬಂಧನ ಬೇಡ– ಆದೇಶ ಪುನಃ ವಿಸ್ತರಣೆ

Published:
Updated:

ಬೆಂಗಳೂರು: ‘ನಟಿ ಶ್ರುತಿ ಹರಿಹರನ್‌ ದಾಖಲಿಸಿರುವ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ನಟ ಅರ್ಜುನ್‌ ಸರ್ಜಾ ಅವರನ್ನು ಡಿ.11ರವರೆಗೆ ಬಂಧಿಸಬಾರದು’ ಎಂದು ಈ ಮೊದಲು ನೀಡಿದ್ದ ಆದೇಶವನ್ನು ಹೈಕೋರ್ಟ್‌ ಪುನಃ ವಿಸ್ತರಿಸಿದೆ.

‘ಕಬ್ಬನ್‌ ಪಾರ್ಕ್‌ ಪೊಲೀಸ್‌ ಠಾಣೆಯಲ್ಲಿ ನನ್ನ ವಿರುದ್ಧ ಶ್ರುತಿ ಹರಿಹರನ್‌ ದಾಖಲಿಸಿರುವ ಎಫ್‌ಐಆರ್ ರದ್ದುಗೊಳಿಸಬೇಕು’ ಎಂದು ಕೋರಿ ಅರ್ಜುನ್‌ ಸರ್ಜಾ ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಪಿ.ಎಸ್‌.ದಿನೇಶ್‌ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ಸರ್ಕಾರದ ಪರ ವಕೀಲರು ಹಾಗೂ ಅರ್ಜಿದಾರರ ಪರ ವಕೀಲರು ಸಮಯಾವಕಾಶ ಕೋರಿದ ಕಾರಣ ನ್ಯಾಯಮೂರ್ತಿಗಳು, ಮಧ್ಯಂತರ ಆದೇಶ ವಿಸ್ತರಿಸಿದರು ಮತ್ತು ವಿಚಾರಣೆಯನ್ನು ಕ್ರಿಸ್ಮಸ್ ರಜೆಯ ನಂತರಕ್ಕೆ ಮುಂದೂಡಿದರು. 

‘ಶ್ರುತಿ ಮೀ–ಟೂ ಆಂದೋಲನದ ನಾಯಕಿಯಾಗಲು ಹವಣಿಸಿದಂತಿದೆ. ಪ್ರಸಿದ್ಧಿಯ ಹುಚ್ಚಿನಲ್ಲಿ ಆಕೆ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ಆದ್ದರಿಂದ ಎಫ್‌ಐಆರ್ ರದ್ದುಗೊಳಿಸಬೇಕು’ ಎಂಬುದು ಅರ್ಜುನ್‌ ಸರ್ಜಾ ಕೋರಿಕೆ.

ಬರಹ ಇಷ್ಟವಾಯಿತೆ?

 • 7

  Happy
 • 2

  Amused
 • 1

  Sad
 • 0

  Frustrated
 • 1

  Angry

Comments:

0 comments

Write the first review for this !