ಬುಧವಾರ, 19 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೆಗಾಸ್ಟಾರ್‌ ಚಿರಂಜೀವಿ ಜೊತೆ ಆಶಿಕಾ ರಂಗನಾಥ್‌ 

Published 28 ಮೇ 2024, 1:13 IST
Last Updated 28 ಮೇ 2024, 1:13 IST
ಅಕ್ಷರ ಗಾತ್ರ

‘ಅಮಿಗೋಸ್‌’ ಸಿನಿಮಾ ಮೂಲಕ ಟಾಲಿವುಡ್‌ಗೆ ಹೆಜ್ಜೆ ಇಟ್ಟಿದ್ದ ನಟಿ ಆಶಿಕಾ ರಂಗನಾಥ್‌, ಬಳಿಕ ‘ನಾ ಸಾಮಿ ರಂಗ’ ಚಿತ್ರದಲ್ಲಿ ಮಿಂಚಿದ್ದರು. ಇದೀಗ ಮತ್ತೊಂದು ತೆಲುಗು ಪ್ರಾಜೆಕ್ಟ್‌ ಒಪ್ಪಿಕೊಂಡಿದ್ದಾರೆ. 

ಸ್ಯಾಂಡಲ್‌ವುಡ್‌ನ ‘ಪಟಾಕಿ ಪೋರಿ’ ಆಶಿಕಾ ಕನ್ನಡ ಸಿನಿಮಾಗಳ ಜೊತೆಗೆ ತೆಲುಗು, ತಮಿಳು ಸಿನಿಮಾಗಳಲ್ಲೂ ತೊಡಗಿಸಿಕೊಂಡಿದ್ದಾರೆ. ಜೂನಿಯರ್ ಎನ್‌ಟಿಆರ್ ಸಹೋದರ ಕಲ್ಯಾಣ್ ರಾಮ್ ಅಭಿನಯದ ‘ಅಮಿಗೋಸ್‌’ ಆಶಿಕಾ ಮೊದಲ ತೆಲುಗು ಸಿನಿಮಾ. ಬಳಿಕ ಅಕ್ಕಿನೇನಿ ನಾಗಾರ್ಜುನ್ ಜೋಡಿಯಾಗಿಯೂ ಆಶಿಕಾ ನಟಿಸಿದ್ದರು. ಈಗ ಮೆಗಾಸ್ಟಾರ್ ಚಿರಂಜೀವಿ ಜೊತೆ ನಟಿಸಲು ಅವರು ಸಜ್ಜಾಗಿದ್ದಾರೆ. ಚಿರಂಜೀವಿ ಅಭಿನಯಿಸುತ್ತಿರುವ ‘ವಿಶ್ವಂಭರ’ ಚಿತ್ರದಲ್ಲಿ ಪ್ರಮುಖ ಪಾತ್ರಕ್ಕೆ ಆಶಿಕಾ ಬಣ್ಣ ಹಚ್ಚಲಿದ್ದಾರೆ ಎಂದಿದೆ ಚಿತ್ರತಂಡ. ಚಿರಂಜೀವಿಗೆ ನಾಯಕಿಯಾಗಿ ತ್ರಿಷಾ ಕೃಷ್ಣನ್​ ನಟಿಸಲಿದ್ದಾರೆ. ಯು.ವಿ. ಕ್ರಿಯೇಷನ್ ಬ್ಯಾನರ್‌ನಡಿ ವಿಕ್ರಮ್, ವಂಶಿ ಹಾಗೂ ಪ್ರಮೋದ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ವಸಿಷ್ಠ ‘ವಿಶ್ವಂಭರ’ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳಿದ್ದಾರೆ. ಆಸ್ಕರ್ ಪ್ರಶಸ್ತಿ ವಿಜೇತ ಎಂ.ಎಂ. ಕೀರವಾಣಿ ಸಂಗೀತ ನಿರ್ದೇಶಕ. 2025ರ ಸಂಕ್ರಾಂತಿಗೆ ಸಿನಿಮಾ ಬಿಡುಗಡೆಯಾಗಲಿದೆ ಎಂದಿದೆ ಚಿತ್ರತಂಡ. 

‘O2’ ಸಿನಿಮಾ ಬಳಿಕ ಸಿಂಪಲ್‌ ಸುನಿ ನಿರ್ದೇಶನದ ‘ಗತವೈಭವ’ ಸಿನಿಮಾ ಮೂಲಕ ಆಶಿಕಾ ಕನ್ನಡದ ಪ್ರೇಕ್ಷಕರ ಎದುರಿಗೆ ಬರಲಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT