ಭಾನುವಾರ, ಸೆಪ್ಟೆಂಬರ್ 26, 2021
28 °C

ಅಶ್ಲೀಲ ಚಿತ್ರ ನಿರ್ಮಾಣ: ಬಂಗಾಳಿ ನಟಿ ನಂದಿತಾ ದತ್ತ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೋಲ್ಕತ್ತ: ನೀಲಿ ಚಿತ್ರ ನಿರ್ಮಾಣ ಆರೋಪದ ಮೇಲೆ ನಟಿ, ರೂಪದರ್ಶಿ ನಂದಿತಾ ದತ್ತ ಹಾಗೂ ಅವರ ಮ್ಯಾನೇಜರ್‌ ಮಾಣಿಕ್‌ ಘೋಷ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್‌ ಕುಂದ್ರಾ ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣದಲ್ಲಿ ಬಂಧಿತನಾಗಿರುವ ಬೆನ್ನಲ್ಲೇ ಪಶ್ಚಿಮ ಬಂಗಾಳದಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ.

ನಂದಿತಾ ದತ್ತ ಅಶ್ಲೀಲ ಚಿತ್ರಗಳನ್ನು ನಿರ್ಮಾಣ ಮಾಡಿ ಅವುಗಳನ್ನು ಓಟಿಟಿ ಮೂಲಕ ಪ್ರಸಾರ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ. ಈ ಸಂಬಂಧ ಜುಲೈ 26ರಂದು ಇಬ್ಬರು ಯುವತಿಯರು ದೂರು ನೀಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ನಂದಿತಾಗೆ ಮ್ಯಾನೇಜರ್‌ ಆಗಿರುವ ಮಾಣಿಕ್‌ ಘೋಷ್‌ ಕೂಡ ನೀಲಿ ಚಿತ್ರಗಳ ನಿರ್ಮಾಣದಲ್ಲಿ ಪಾಲುದಾರನಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಕೋಲ್ಕತ್ತದ ಹೊರ ವಲಯದ ಬಂಗಲೆಗಳನ್ನು ಬಾಡಿಗೆಗೆ ಪಡೆದು ಅಲ್ಲಿ ನೀಲಿ ಚಿತ್ರಗಳ ವಿಡಿಯೊಗಳನ್ನು ಚಿತ್ರೀಕರಿಸಲಾಗುತ್ತಿತ್ತು. ಇದಕ್ಕಾಗಿ ರೂಪದರ್ಶಿಗಳ ಹಾಗೂ ಸಿನಿಮಾಗಳ ಅವಕಾಶಕ್ಕಾಗಿ ಕಾಯುತ್ತಿರುವ ಹೊಸ ಪ್ರತಿಭಗೆಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದರು. ಈ ಪ್ರಕರಣ ಸಂಬಂಧ ತೀವ್ರ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ರೂಪದರ್ಶಿ ನಂದಿತಾ ದತ್ತ ಹತ್ತಾರು ಬಂಗಾಳಿ ಹಾಗೂ ಬೋಜ್‌ಪುರಿ ಸಿನಿಮಾಗಳಲ್ಲಿ ನಟಿಸಿದ್ದಾರೆ.  

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು