ಶುಕ್ರವಾರ, 2 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತಿ ಉದ್ದದ ‘ಅಥಿ’ ಶೂಟಿಂಗ್‌

Last Updated 7 ಮಾರ್ಚ್ 2023, 11:08 IST
ಅಕ್ಷರ ಗಾತ್ರ

ನಿರ್ದಿಷ್ಟ ದೃಶ್ಯವನ್ನು ಎಲ್ಲೂ ಕಟ್‌ ಹೇಳದೇ ದೀರ್ಘ ಅವಧಿಗೆ ಚಿತ್ರೀಕರಿಸಿದರೆ ಹೇಗೆ? ಅಂಥದ್ದೊಂದು ಪ್ರಯೋಗ ಮಾಡಿದೆ ‘ಅಥಿ ಐ ಲವ್ ಯು’ ಚಿತ್ರ. ಅಂದಹಾಗೆ ಈ ಷಾಟ್‌ನಲ್ಲಿ ಕಾಣಿಸಿಕೊಂಡವರು ಶ್ರಾವ್ಯ ರಾವ್‌ – ಲೋಕೇಂದ್ರ ಸೂರ್ಯ ಜೋಡಿ.

ಒಂದೇ ದಿನದಲ್ಲಿ, ಒಂದು ಮನೆಯಲ್ಲಿ ನಡೆಯುವ ಕತೆ ಈ ಚಿತ್ರದಲ್ಲಿದೆ. ಗಂಡ-ಹೆಂಡತಿಯ ನಡುವಿನ ಆಪ್ತ ದೃಶ್ಯಗಳು ಇಲ್ಲಿ ಪ್ರಮುಖವಾಗಿರಲಿವೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಮನೆಯೊಳಗೆ ನಡೆದ ಒಂದೇ ಷಾಟ್‌ ಚಿತ್ರೀಕರಣ 11 ನಿಮಿಷ ನಡೆದಿದೆ. ಮಲಗಿದ್ದ ಗಂಡ ಹೆಂಡತಿ ಎದ್ದನಂತರದ ದೀರ್ಘವಾದ ಈ ದೃಶ್ಯಕ್ಕಾಗಿ ಸಾಕಷ್ಟು ತಯಾರಿಯನ್ನೂ ಮಾಡಿಕೊಳ್ಳಲಾಗಿತ್ತು. ಮನೆಯಲ್ಲೇ ವಿವಿಧ ಕೋನಗಳಲ್ಲಿ ಲೈಟಿಂಗ್‌ ವ್ಯವಸ್ಥೆ ರೂಪಿಸಿ, ಕ್ಯಾಮೆರಾ ಚಲನೆಗೆ ಪ್ಲಾನ್‌ ಮಾಡಲಾಗಿತ್ತು. ಅಂದುಕೊಂಡಂತೇ ಈ ದೃಶ್ಯ ಮೂಡಿಬಂದಿದ್ದು ಚಿತ್ರತಂಡದ ಸಂತಸಕ್ಕೆ ಕಾರಣವಾಗಿದೆ.

ರೆಡ್ ಆ್ಯಂಡ್‌ ವೈಟ್ ಸೆವೆನ್ ರಾಜ್ ಅವರ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಎರಡನೇ ಚಿತ್ರವಿದು. ಲೋಕೇಂದ್ರ ಸೂರ್ಯ ಚಿತ್ರದ ನಾಯಕ, ನಿರ್ದೇಶಕರೂ ಹೌದು. ಒಂದೇ ಷಾಟ್‌ ಚಿತ್ರೀಕರಣದಿಂದಾಗಿ ದೃಶ್ಯಗಳು ಸಹಜವಾಗಿ ಮೂಡಿಬಂದಿವೆ ಎಂಬುದು ಚಿತ್ರತಂಡದ ಹೇಳಿಕೆ.

ಮೇ ಮೊದಲ ವಾರದಲ್ಲೇ ಬಿಡುಗಡೆ ಮಾಡುತ್ತೇವೆ ಎಂದು ನಿರ್ಮಾಪಕ ರೆಡ್ ಅಂಡ್ ವೈಟ್ ಸೆವೆನ್ ರಾಜ್ ಅವರು ತಮ್ಮ ಸಂತಸ ಹಂಚಿಕೊಂಡರು. ‘ಕುಗ್ರಾಮ’ ಚಿತ್ರದ ನಟಿ ಋತು ಚೈತ್ರಾ ಅವರೇ ವಸ್ತ್ರ ವಿನ್ಯಾಸ ಮಾಡಿದ್ದಾರೆ. ಅನಂತ್ ಆರ್ಯನ್ ಸಂಗೀತ ಚಿತ್ರಕ್ಕಿದೆ. ನಟಿ ಋತು ಚೈತ್ರ ಈ ಚಿತ್ರಕ್ಕೆ ವಸ್ತ್ರ ವಿನ್ಯಾಸ ಮಾಡಿರುವುದು ವಿಶೇಷ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT