ಬಹುತೇಕ ಹೊಸಬರಿಂದಲೇ ಕುಡಿರುವ ‘ಪ್ರೇಮಿಗಳ ಗಮನಕ್ಕೆ’ ಚಿತ್ರದ ಟ್ರೇಲರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ವಿನ್ಸೆಂಟ್ ಇನ್ಬರಾಜ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.

‘ಇತ್ತೀಚಿನ ದಿನಗಳಲ್ಲಿ ನಗರ ಪ್ರದೇಶಗಳಲ್ಲಿ ವಾಸಿಸುವ, ಅದರಲ್ಲೂ ಬೇರೆ ಊರುಗಳಿಂದ ಬಂದವರ ನಡುವೆ ಲಿವಿಂಗ್ ರಿಲೇಶನ್ಶಿಪ್ ಹೆಚ್ಚಾಗುತ್ತಿದೆ. ಬೆಂಗಳೂರಿನಂಥ ನಗರದ ಐಟಿ, ಬಿಟಿ ಕಂಪನಿಗಳಲ್ಲಿ ಕೆಲಸ ಮಾಡುವ ಉದ್ಯೋಗಿಗಳಲ್ಲಿ ಇಂಥ ಸಂಬಂಧಗಳು ಹೆಚ್ಚಾಗಿ ಕಂಡುಬರುತ್ತಿದೆ. ಕೋವಿಡ್ ಲಾಕ್ಡೌನ್ ಸಂದರ್ಭದಲ್ಲಿ ಲಿವಿಂಗ್ ರಿಲೇಶನ್ಶಿಪ್ನಲ್ಲಿದ್ದ ಇಬ್ಬರು ಪ್ರೇಮಿಗಳ ಸುತ್ತ ನಡೆಯುವ ಕಥಾಹಂದರ ಒಳಗೊಂಡ ಚಿತ್ರವಿದು. ಆಗ ಆ ಮನೆಯಲ್ಲಿ ಏನೇನು ನಡೆಯುತ್ತದೆ?, ಆಗಂತುಕನೊಬ್ಬ ಆ ಮನೆಗೆ ಎಂಟ್ರಿ ಕೊಟ್ಟಾಗ ಏನಾಗುತ್ತದೆ ಎಂಬುದೇ ಚಿತ್ರಕಥೆ. ಐದು ವರ್ಷಗಳ ಹಿಂದೆ ತಮಿಳುನಾಡಿನಲ್ಲಿ ನಡೆದ ಒಂದು ನೈಜಘಟನೆ ಚಿತ್ರಕ್ಕೆ ಪ್ರೇರಣೆ. ಇಡೀ ಚಿತ್ರದ ಕಥೆ ನಡೆಯೋದು ಒಂದೇ ಮನೆಯಲ್ಲಿ, ಎರಡು ಪಾತ್ರಗಳ ಸುತ್ತ. ಮತ್ತೊಂದು ಪಾತ್ರ ಕೆಲ ದೃಶ್ಯಗಳಲ್ಲಿ ಮಾತ್ರ ಬಂದುಹೋಗುತ್ತದೆ. ಜಾಗೃತಿ ಜತೆಗೆ ಮನರಂಜನೆಯ ಅಂಶವನ್ನಿಟ್ಟುಕೊಂಡು ಮಾಡಿರುವ ಚಿತ್ರವಿದು’ ಎಂದರು ನಿರ್ದೇಶಕ.

ಸಿಟಾಡಿಲ್ ಫಿಲ್ಮ್ಸ್ ಹಾಗೂ ಜೊಯಿಟಾ ಎಂಟರ್ಟೈನ್ಮೆಂಟ್ಸ್ ಅಡಿ ಸುಬ್ಬು ಹಾಗೂ ಯಕ್ಕಂಟಿ ರಾಜಶೇಖರ ರೆಡ್ಡಿ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಬಿಗ್ಬಾಸ್ ಖ್ಯಾತಿಯ ಶಶಿ ಚಿತ್ರದ ನಾಯಕನಾಗಿ ಕಾಣಿಸಿಕೊಂಡಿದ್ದು, ಈಗಾಗಲೇ ಕನ್ನಡ, ತುಳು ಚಿತ್ರಗಳಲ್ಲಿ ನಟಿಸಿರುವ ಚಿರಶ್ರೀ ಅಂಚನ್ ನಾಯಕಿ. ಅರುಳ್ ಸೆಲ್ವನ್ ಅವರ ಛಾಯಾಚಿತ್ರಗ್ರಹಣ, ಡೆನ್ನಿಸ್ ವಲ್ಲಭನ್ ಸಂಗೀತ ಸಂಯೋಜನೆ ಚಿತ್ರಕ್ಕಿದೆ.

ಇದೇ ತಿಂಗಳ ಅಂತ್ಯದಲ್ಲಿ ಚಿತ್ರವನ್ನು ತೆರೆಗೆ ತರುವ ಯೋಜನೆಯಿದೆ ಎಂದಿದೆ ಚಿತ್ರತಂಡ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.