ಗುರುವಾರ , ಅಕ್ಟೋಬರ್ 6, 2022
26 °C

ಮತ್ತೆ ಚಿತ್ರಮಂದಿರಗಳಲ್ಲಿ ಅವತಾರವೆತ್ತಿದ್ದ ‘ಅವತಾರ್’: ರಿರಿಲೀಸ್ ವಿಶೇಷತೆ ಏನು?

ಪ್ರಜಾವಾಣಿ ವೆಬ್‌ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಬೆಂಗಳೂರು: 2009ರಲ್ಲಿ ಬಿಡುಗಡೆಯಾಗಿ ಜಾಗತಿಕ ದಾಖಲೆಗಳನ್ನು ದೂಳಿಪಟ ಮಾಡಿದ್ದ ಜೇಮ್ಸ್ ಕೆಮರೂನ್ ನಿರ್ದೇಶನದ 'ಅವತಾರ್' ಸಿನಿಮಾ ಇದೀಗ ಹೊಸ ಅವತಾರದಲ್ಲಿ ಚಿತ್ರಮಂದಿರಗಳಲ್ಲಿ ಪುನಃ ಬಿಡುಗಡೆಯಾಗುತ್ತಿದೆ.

ಸೆ.23 ರಂದು ಅವತಾರ್ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುತ್ತಿದ್ದು, ಜಗತ್ತಿನಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಚಿತ್ರತಂಡ ಹೇಳಿದೆ.

4ಕೆ ಎಚ್‌ಡಿಆರ್‌ನ 3ಡಿ ಅವತಾರದಲ್ಲಿ ಹಾಗೂ ಅತ್ಯಾಧುನಿಕ ಸೌಂಡ್ ತಂತ್ರಜ್ಞಾನದಲ್ಲಿ ಈ ಬ್ಲಾಕ್‌ಬಸ್ಟರ್ ಸಿನಿಮಾ ಚಿತ್ರರಸಿಕರಿಗೆ ಮತ್ತೆ ದೊಡ್ಡ ಪರದೆಯಲ್ಲಿ ಬಂದಿದೆ ಹಾಗೂ ಅವತಾರ್‌ನ ಮುಂದುವರೆದ ಸರಣಿಯಾಗಿರುವ 'ಅವತಾರ್ ದಿ ವೇ ಆಫ್ ವಾಟರ್' ಸಿನಿಮಾ ಡಿಸೆಂಬರ್ 16 ರಂದು ಬಿಡುಗಡೆಯಾಗುತ್ತಿದ್ದು ಅದರ ಅಂಗವಾಗಿ ಅವತಾರ್ ಮತ್ತೆ ಬಿಡುಗಡೆಯಾಗುತ್ತಿದೆ.

ಸುಮಾರು 2 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗಿದ್ದ ಅವತಾರ್ ಜಾಗತಿಕ ಮಾರುಕಟ್ಟೆಯಲ್ಲಿ 8 ಸಾವಿರ ಕೋಟಿಗೂ ಹೆಚ್ಚು ಹಣ ಗಳಿಸಿತ್ತು ಎಂದು ವರದಿಗಳು ಹೇಳಿವೆ.

ನಟರಾದ ವರ್ಥಿಂಗ್‌ಟನ್, ಜೋ ಸಲ್ಡಾನಾ, ಸ್ಟೀಪನ್ ಲಾಂಗ್, ಮಿಚಲ್ ರೋಡ್ರಿಗಜ್, ಸಿಗೋರನಿ ವೇವರ್ ಸೇರಿದಂತೆ ಮುಖ್ಯ ತಾರಾಗಣದಲ್ಲಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು