ಬೆಂಗಳೂರು: ಹಾಲಿವುಡ್ ನಿರ್ದೇಶಕ ಜೇಮ್ಸ್ ಕೆಮರೂನ್ ಅವರ 'ಅವತಾರ್ ದಿ ವೇ ಆಫ್ ವಾಟರ್' ಸಿನಿಮಾ ಒಟಿಟಿ ವೇದಿಕೆಗೆ ದಾಂಗುಡಿ ಇಟ್ಟಿದೆ.
ಮಾರ್ಚ್ 28 ರಿಂದ ಅಮೆಜಾನ್ ಪ್ರೈಮ್, ಆ್ಯಪಲ್ ಹಾಗೂ ವುಡು (VUDU ಇದು ಅಮೆರಿಕದ ಜನಪ್ರಿಯ ಸ್ಟ್ರೀಮಿಂಗ್ ಆ್ಯಪ್) ಗಳಲ್ಲಿ ಅವತಾರ್ 2 ಪ್ರಸಾರವಾಗಲಿದೆ.
ಈ ಬಗ್ಗೆ ಅವತಾರ್ 2 ಚಿತ್ರದ ಅಧಿಕೃತ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಮಾಹಿತಿ ನೀಡಲಾಗಿದೆ. ಈ ಚಿತ್ರ ಡಿಸೆಂಬರ್ 16 ರಂದು ಶುಕ್ರವಾರ ಜಾಗತಿಕವಾಗಿ ಚಿತ್ರಮಂದಿರಗಳಿಗೆ ಅಪ್ಪಳಿಸಿತ್ತು.
ಇನ್ನು 3 ಗಂಟೆ 11 ನಿಮಿಷ ಇರುವ ಈ ಚಿತ್ರ ಭಾರತದಲ್ಲಿ ಸುಮಾರು 3,000 ಸ್ಕ್ರೀನ್‌ಗಳಲ್ಲಿ ಬಿಡುಗಡೆಯಾಗಿತ್ತು. ‘20th ಸೆಂಚುರಿ ಸ್ಟುಡಿಯೋಸ್ ಇಂಡಿಯಾ’ ಕಂಪನಿ ಭಾರತದಲ್ಲಿ ಈ ಚಿತ್ರವನ್ನು ಹಂಚಿಕೆ ಮಾಡಿತ್ತು.
ನಟರಾದ ವರ್ಥಿಂಗ್‌ಟನ್, ಜೋ ಸಲ್ಡಾನಾ, ಸ್ಟೀಪನ್ ಲಾಂಗ್, ಮಿಚಲ್ ರೋಡ್ರಿಗಜ್, ಸಿಗೋರನಿ ವೇವರ್, ಕೇಟ್ ವಿನ್ಸ್‌ಲೆಟ್ ಸೇರಿದಂತೆ ಹಲವರು ಮುಖ್ಯ ತಾರಾಗಣದಲ್ಲಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.