ಮಂಗಳವಾರ, ಜನವರಿ 25, 2022
24 °C

ಸದ್ಯಕ್ಕೆ ‘ಅವತಾರ’ವೆತ್ತುತ್ತಿಲ್ಲ ಶರಣ್‌!

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚುಟು–ಚುಟು ಜೋಡಿ ಶರಣ್‌ ಹಾಗೂ ಆಶಿಕಾ ರಂಗನಾಥ್‌ ಅಭಿನಯದ, ಸಿಂಪಲ್‌ ಸುನಿ ನಿರ್ದೇಶನದ ‘ಅವತಾರ ಪುರುಷ’ ಸಿನಿಮಾ ಬಿಡುಗಡೆಯನ್ನು ಚಿತ್ರತಂಡವು ಮುಂದೂಡಿದೆ.

ಡಿ.10ಕ್ಕೆ ಚಿತ್ರ ಬಿಡುಗಡೆಗೆ ಚಿತ್ರತಂಡ ಸಿದ್ಧತೆ ಮಾಡಿಕೊಂಡು, ರಿಲೀಸ್‌ ದಿನಾಂಕವನ್ನೂ ಘೋಷಿಸಿತ್ತು. ಆದರೆ ಪ್ರಸ್ತುತ ಎದುರಾಗಿರುವ ಓಮೈಕ್ರಾನ್‌ ಭೀತಿ ಹಾಗೂ ಚಿತ್ರಮಂದಿರಗಳಿಗೆ ಎರಡು ಡೋಸ್‌ ಲಸಿಕೆ ಕಡ್ಡಾಯ ಮಾಡಿರುವುದರಿಂದ ಪ್ರೇಕ್ಷಕರು ಚಿತ್ರಮಂದಿರದತ್ತ ಬರುತ್ತಾರೋ ಇಲ್ಲವೋ ಎನ್ನುವ ಸಂಶಯದ ಮೇಲೆ ಚಿತ್ರತಂಡವು ಬಿಡುಗಡೆ ದಿನಾಂಕವನ್ನು ಕೊನೆ ಕ್ಷಣದಲ್ಲಿ ಮುಂದೂಡಿದೆ. ಮುಂದಿನ ಪರಿಸ್ಥಿತಿ ನೋಡಿಕೊಂಡು ಬಿಡುಗಡೆ ದಿನಾಂಕ ಘೋಷಿಸಲಿದ್ದೇವೆ ಎಂದು ಚಿತ್ರತಂಡವು ತಿಳಿಸಿದೆ. 

ವಾಮಾಚಾರ, ಮಾಟ ಮಂತ್ರದ ಸುತ್ತ ಈ ಚಿತ್ರದ ಕಥೆ ಹೆಣೆಯಲಾಗಿದ್ದು, ಶರಣ್‌ ಜೂನಿಯರ್‌ ಆರ್ಟಿಸ್ಟ್‌ ಪಾತ್ರದಲ್ಲಿ ಹತ್ತಕ್ಕೂ ಹೆಚ್ಚು ಗೆಟ್‌ಅಪ್‌ಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಪುಷ್ಕರ ಮಲ್ಲಿಕಾರ್ಜುನಯ್ಯ ಅವರು ನಿರ್ಮಾಣ ಮಾಡಿರುವ ಈ ಚಿತ್ರವು ಎರಡು ಭಾಗಗಳಲ್ಲಿ ತೆರೆಕಾಣುತ್ತಿದ್ದು, ಮೊದಲನೇ ಭಾಗ ರಿಲೀಸ್‌ ಆದ 101ನೇ ದಿನಕ್ಕೆ ಎರಡನೇ ಭಾಗವನ್ನು ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು