ಬುಧವಾರ, ಅಕ್ಟೋಬರ್ 16, 2019
21 °C

ಅ. 14ಕ್ಕೆ ‘ಆಯುಷ್ಮಾನ್‌ಭವ’ ಸಿನಿಮಾದ ಟೀಸರ್‌ ಬಿಡುಗಡೆ

Published:
Updated:
Prajavani

ಪಿ. ವಾಸು ನಿರ್ದೇಶನದ ‘ಸೆಂಚುರಿ ಸ್ಟಾರ್‌’ ಶಿವರಾಜ್‌ಕುಮಾರ್‌ ನಟನೆಯ ‘ಆಯುಷ್ಮಾನ್‌ಭವ’ ಚಿತ್ರದ ಟೀಸರ್‌ ಅಕ್ಟೋಬರ್ 14ರಂದು ಬಿಡುಗಡೆಯಾಗಲಿದೆ. 

ಶಿವಣ್ಣ ಅವರಿಗೆ ನಟಿ ರಚಿತಾ ರಾಮ್‌ ಜೋಡಿಯಾಗಿದ್ದಾರೆ. ಈ ಚಿತ್ರಕ್ಕೆ ‘ಆನಂದ್‌’ ಎಂದು ಹೆಸರಿಡಲಾಗಿತ್ತು. ಆದರೆ, ಚಿತ್ರಕಥೆಗೂ ಮತ್ತು ಟೈಟಲ್‌ಗೆ ಹೊಂದಾಣಿಕೆಯಾಗದ ಪರಿಣಾಮ ‘ಆಯುಷ್ಮಾನ್‌ಭವ’ ಎಂದು ಹೆಸರಿಡಲಾಗಿದೆ. ದ್ವಾರಕೀಶ್‌ ಚಿತ್ರಾಲಯ ಸಂಸ್ಥೆಯಿಂದ ಈ ಚಿತ್ರ ನಿರ್ಮಿಸಲಾಗಿದ್ದು, ನವೆಂಬರ್‌ 1ರಂದು ತೆರೆ ಕಾಣುತ್ತಿದೆ.

 
 
 
 

 
 
 
 
 
 
 
 
 

#Aayushmanbhava October 14 teaser release date ಫಿಕ್ಸ್ ಆಯ್ತು :) #AayushmanbhavaTeaseron14th

A post shared by DrShivaRajkumar (@nimmashivarajkumar) on

‘ಪಂಚರಂಗಿ’ ಬೆಡಗಿ ನಿಧಿ ಸುಬ್ಬಯ್ಯ ಈ ಚಿತ್ರದ ಮೂಲಕ ವೃತ್ತಿಬದುಕಿನ ಎರಡನೇ ಇನ್ನಿಂಗ್ಸ್‌ ಆರಂಭಿಸುತ್ತಿರುವ ಖುಷಿಯಲ್ಲಿದ್ದಾರೆ. ಅಂತರರಾಷ್ಟ್ರೀಯ ಗುಣಮಟ್ಟಕ್ಕೆ ತಕ್ಕಂತೆ ಗ್ರಾಫಿಕ್ಸ್ ತಂತ್ರಗಾರಿಕೆ ಹೆಣೆಯಲಾಗಿದೆ. ಒಂದು ಕಾಲು ಗಂಟೆಗೂ ಹೆಚ್ಚು ಸಮಯದ ವಿಷುವಲ್ ಎಫೆಕ್ಟ್ ಇದೆ. ಪಿ.ಕೆ.ಎಚ್‌. ದಾಸ್ ಅವರ ಛಾಯಾಗ್ರಹಣವಿದೆ. ಚಿತ್ರದ ಐದು ಹಾಡುಗಳಿಗೆ ಗುರುಕಿರಣ್‌ ಸಂಗೀತ ಸಂಯೋಜಿಸಿದ್ದಾರೆ.  ಅನಂತನಾಗ್, ಸುಹಾಸಿನಿ ಮಣಿರತ್ನಂ, ಸುಧಾರಾಣಿ, ಶಿವಾಜಿ ಪ್ರಭು, ಜೈಜಗದೀಶ್, ಸುಧಾ ಬೆಳವಾಡಿ ತಾರಾಗಣದಲ್ಲಿದ್ದಾರೆ.

‘ಅ. 14ರಂದು ಮಧ್ಯಾಹ್ನ 12ಗಂಟೆಗೆ ಟೀಸರ್‌ ಬಿಡುಗಡೆಯಾಗುತ್ತಿದ್ದು, ಎಲ್ಲರೂ ನೋಡಿ ಪ್ರೋತ್ಸಾಹ ನೀಡಬೇಕು’ ಎಂದು ಶಿವರಾಜ್‌ಕುಮಾರ್‌ ಟ್ವಿಟರ್‌ನಲ್ಲಿ ಕೋರಿದ್ದಾರೆ.

Post Comments (+)