ಕನ್ನಡದ ನಟಿ, ನಿರ್ದೇಶಕಿ ರೂಪ ಅಯ್ಯರ್ ನಿರ್ದೇಶನದ ‘ಆಜಾದ್ ಭಾರತ್’ ಎಂಬ ಹಿಂದಿ ಚಿತ್ರವು ಜ.2 ರಂದು ದೇಶದಾದ್ಯಂತ ಬಿಡುಗಡೆಯಾಗಲಿದೆ.

‘ನೀರಾ ಆರ್ಯ’ ಎಂಬ ಹೆಸರಿನಿಂದ ಶುರುವಾದ ಈ ಚಿತ್ರದ ಶೀರ್ಷಿಕೆಯನ್ನು ಇದೀಗ ‘ಆಜಾದ್ ಭಾರತ್’ ಎಂದು ಬದಲಿಸಿದೆ ಚಿತ್ರತಂಡ. ಈ ಚಿತ್ರವನ್ನು ನೇತಾಜಿ ಸುಭಾಷಚಂದ್ರ ಬೋಸ್ ಅವರಿಗೆ ಅರ್ಪಣೆ ಮಾಡಿದೆ ಚಿತ್ರತಂಡ. ಸುಭಾಷಚಂದ್ರ ಬೋಸ್ ಸ್ಥಾಪಿಸಿದ್ದ ಮೊದಲ ಮಹಿಳಾ ಸೇನೆಯ ಕಥೆ ‘ಆಜಾದ್ ಭಾರತ್’ ಚಿತ್ರದಲ್ಲಿದೆ. ‘ನೇತಾಜಿ ಪಾತ್ರದಲ್ಲಿ ಬಾಲಿವುಡ್ ನಟ ಶ್ರೇಯಸ್ ತಲ್ಪಡೆ ಬಣ್ಣಹಚ್ಚಿದ್ದಾರೆ. ಈ ಚಿತ್ರದಲ್ಲಿ ಮೂರು ಮಹಿಳಾ ಮುಖ್ಯ ಪಾತ್ರಗಳಿದ್ದು, ನಾನು ‘ನೀರಾ ಆರ್ಯ’ ಪಾತ್ರದಲ್ಲಿ, ಹಿತಾ ಚಂದ್ರಶೇಖರ್ ‘ದುರ್ಗಾ’ ಪಾತ್ರದಲ್ಲಿ ನಟಿಸಿದ್ದೇವೆ. ಸರಸ್ವತಿ ರಾಜಾಮಣಿ ಎಂಬ ಪಾತ್ರದಲ್ಲಿ ಜನಪ್ರಿಯ ನಟಿಯೊಬ್ಬರು ಕಾಣಿಸಿಕೊಂಡಿದ್ದಾರೆ. ಸುರೇಶ್ ಒಬೆರಾಯ್, ಬಿರಾದಾರ್, ಸುಚೇಂದ್ರ ಪ್ರಸಾದ್, ಸುಭಾಷ್ ಚಂದ್ರ ಮುಂತಾದವರು ತಾರಾಬಳಗದಲ್ಲಿದ್ದಾರೆ’ ಎಂದು ಮಾಹಿತಿ ನೀಡಿದರು ರೂಪಾ ಅಯ್ಯರ್.

‘ಗೌತಮ್ ಶ್ರೀವತ್ಸ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಈ ಚಿತ್ರವನ್ನು ನಿರ್ಮಾಣ ಮಾಡುವ ಮೊದಲು ಸುಭಾಷಚಂದ್ರ ಬೋಸ್ ಅವರ ಕುಟುಂಬದವರನ್ನು ಸಂಪರ್ಕ ಮಾಡಿ ಅನೇಕ ಮಾಹಿತಿ ಪಡೆದುಕೊಂಡಿದ್ದೇನೆ. ವಿವಿಧ ಕ್ಷೇತ್ರಗಳ ಗಣ್ಯರಿಗೆ ಈ ಚಿತ್ರ ತೋರಿಸುವ ಯೋಚನೆ ಇದೆ. ಜೀ ಸ್ಟುಡಿಯೋಸ್ ಮೂಲಕ ಈ ಚಿತ್ರ ಬಿಡುಗಡೆಯಾಗುತ್ತಿದೆ’ ಎಂದರು ರೂಪಾ.

‘ಚಿತ್ರದಲ್ಲಿ ಏಳು ಹಾಡುಗಳಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಪತ್ನಿ ಅಮೃತ ಫಡ್ನವಿಸ್ ಅವರು ನಮ್ಮ ಚಿತ್ರದ ಹಾಡೊಂದನ್ನು ಹಾಡಿದ್ದಾರೆ. ಯಶ್ ರಾಜ್ ಸ್ಟುಡಿಯೊದಲ್ಲಿ ರೀರೆಕಾರ್ಡಿಂಗ್ ನಡೆದಿದೆ’ ಎಂದರು ಸಂಗೀತ ನಿರ್ದೇಶಕ ಗೌತಮ್ ಶ್ರೀವತ್ಸ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.