ಹೈದರಾಬಾದ್: ‘ಬಾಹುಬಲಿ’ ಖ್ಯಾತಿಯ ಚಿತ್ರ ನಿರ್ದೇಶಕ ಎಸ್.ಎಸ್.ರಾಜಮೌಳಿ ಮತ್ತು ಅವರ ಕುಟುಂಬ ಸದಸ್ಯರಿಗೆ ಕೋವಿಡ್–19 ಇರುವುದು ಗುರುವಾರ ದೃಢಪಟ್ಟಿದೆ. ಹೀಗಾಗಿ ಅವರೆಲ್ಲರೂ ಮನೆಯಲ್ಲೇ ಕ್ವಾರಂಟೈನ್ ಆಗಿದ್ದಾರೆ.

‘ನನಗೆ ಮತ್ತು ಕುಟುಂಬ ಸದಸ್ಯರಿಗೆ ಕೆಲವು ದಿನಗಳ ಹಿಂದೆ ಸ್ವಲ್ಪ ಜ್ವರ ಕಾಣಿಸಿಕೊಂಡಿತು. ಅದು ತಾನಾಗಿಯೇ ಕಡಿಮೆಯಾಯಿತು. ಆದರೂ ನಾವು ಕೋವಿಡ್ ಪರೀಕ್ಷೆಗೆ ಒಳಪಟ್ಟೆವು. ಕೊರೊನಾ ವೈರಸ್ನ ಅಲ್ಪ ಪ್ರಮಾಣದ ಸೋಂಕಿರುವುದು ಪರೀಕ್ಷೆಯಲ್ಲಿ ಗೊತ್ತಾಗಿದೆ. ವೈದ್ಯರು ಸೂಚಿಸಿದಂತೆ ನಾವು ಮನೆಯಲ್ಲಿ ಕ್ವಾರಂಟೈನಲ್ಲಿ ಇದ್ದೇವೆ,’ ಎಂದು ರಾಜಮೌಳಿ ತಿಳಿಸಿದ್ದಾರೆ.

‘ದೇಹದಲ್ಲಿ ಪ್ರತಿಕಾಯಗಳು ಅಭಿವೃದ್ಧಿ ಹೊಂದಲು ಕಾಯುತ್ತಿದ್ದೇವೆ. ಶೀಘ್ರದಲ್ಲೇ ಪ್ಲಾಸ್ಮಾ ದಾನ ಮಾಡಲಿದ್ದೇವೆ,’ ಎಂದೂ ರಾಜಮೌಳಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.