ಮುಂಬೈ: ಬ್ಲಾಕ್‌ಬಸ್ಟರ್ 'ಬಾಹುಬಲಿ' ಸರಣಿಯಲ್ಲಿ ಕಟ್ಟಪ್ಪ ಪಾತ್ರದಲ್ಲಿ ಹೆಸರುವಾಸಿಯಾದ ಹಿರಿಯ ನಟ ಸತ್ಯರಾಜ್ ಅವರು ಕೊರೊನಾ ವೈರಸ್ ಸೋಂಕಿನಿಂದ ಚೇತರಿಸಿಕೊಂಡ ನಂತರ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ ಎಂದು ಅವರ ಮಗ ಸಿಬಿ ಸತ್ಯರಾಜ್ ಮಂಗಳವಾರ ತಿಳಿಸಿದ್ದಾರೆ.

67 ವರ್ಷದ ನಟ, ಬಾಹುಬಲಿಯಲ್ಲಿನ ತಮ್ಮ ನಟನೆಗೆ ಹೆಚ್ಚು ಹೆಸರುವಾಸಿಯಾಗಿದ್ದಾರೆ. ಅವರಿಗೆ ಕೋವಿಡ್ ಪಾಸಿಟಿವ್ ಆದ ಹಿನ್ನೆಲೆಯಲ್ಲಿ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿತ್ತು.

ಸತ್ಯರಾಜ್ ಅವರು ಆಸ್ಪತ್ರೆಗೆ ದಾಖಲಾದ ನಂತರ 'ಸಂಪೂರ್ಣವಾಗಿ ಚೆನ್ನಾಗಿದ್ದಾರೆ' ಮತ್ತು ಕೆಲವೇ ದಿನಗಳಲ್ಲಿ ಕೆಲಸವನ್ನು ಪುನರಾರಂಭಿಸಲು ಸಜ್ಜಾಗಿದ್ದಾರೆ ಎಂದು ಅವರ ಮಗ ತಿಳಿಸಿದ್ದಾರೆ.

'ಅಪ್ಪಾ ನಿನ್ನೆ ರಾತ್ರಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಮರಳಿದ್ದಾರೆ. ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ ಮತ್ತು ಕೆಲವು ದಿನಗಳ ವಿಶ್ರಾಂತಿಯ ನಂತರ ಕೆಲಸವನ್ನು ಪುನರಾರಂಭಿಸುತ್ತಾರೆ. ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕೆ ಎಲ್ಲರಿಗೂ ಧನ್ಯವಾದಗಳು! ಎಂದು ಅವರು ಸಿಬಿ ಸತ್ಯರಾಜ್ ಟ್ವೀಟ್ ಮಾಡಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ, 'ಹಿರಿಯ ನಟ ಯಾವುದೇ ಸಾಮಾಜಿಕ ಮಾಧ್ಯಮದಲ್ಲಿಯೂ ಖಾತೆಯನ್ನು ಹೊಂದಿಲ್ಲ. ಹೀಗಾಗಿ ಅವರ ಹೆಸರಿನಲ್ಲಿ ಯಾವುದೇ ಖಾತೆಯನ್ನು ಬಳಸುತ್ತಿದ್ದರೆ, ಅಂತಹ ಖಾತೆಯನ್ನು 'ಅನ್‌ಫಾಲೋ, ಬ್ಲಾಕ್ ಮತ್ತು ರಿಪೋರ್ಟ್' ಮಾಡಿ ಎಂದು ಅಭಿಮಾನಿಗಳಲ್ಲಿ ಕೇಳಿಕೊಂಡಿದ್ದಾರೆ.

ಇತ್ತೀಚೆಗಷ್ಟೇ ತೆಲುಗು ನಟ ಮಹೇಶ್ ಬಾಬು (46), ಬಹುಭಾಷಾ ನಟಿ ತ್ರಿಷಾ ಕೃಷ್ಣನ್ ಅವರಿಗೂ ಕೋವಿಡ್ ದೃಢಪಟ್ಟಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.