ಭಾನುವಾರ, 3 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿತ್ರೀಕರಣ ಪೂರ್ಣಗೊಳಿಸಿದ ‘ಬ್ಯಾಕ್‌ ಬೆಂಚರ್ಸ್‌’

Published 14 ಡಿಸೆಂಬರ್ 2023, 23:26 IST
Last Updated 14 ಡಿಸೆಂಬರ್ 2023, 23:26 IST
ಅಕ್ಷರ ಗಾತ್ರ

ಪ್ರೇಕ್ಷಕರಿಗೆ ಮನರಂಜನೆಯ ರಸದೌತಣವನ್ನು ಬಡಿಸುತ್ತೇವೆ ಎನ್ನುತ್ತಾ ಹೊಸಬರ ತಂಡವೊಂದು ತೆರೆಗೆ ಬರುತ್ತಿದೆ. ಪಿ.ಪಿ.ಪ್ರೊಡಕ್ಷನ್ಸ್ ಲಾಂಛನದಲ್ಲಿ ರಮ್ಯ ಅವರು ನಿರ್ಮಿಸಿರುವ, ಬಿ.ಆರ್ ರಾಜಶೇಖರ್ ನಿರ್ದೇಶನದ ‘ಬ್ಯಾಕ್ ಬೆಂಚರ್ಸ್’ ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ.

ಇತ್ತೀಚೆಗೆ ಈ ಚಿತ್ರದ ಹಾಡೊಂದು ಆನಂದ್ ಆಡಿಯೊ ಮೂಲಕ ಬಿಡುಗಡೆಯಾಗಿದೆ. ನಕುಲ್ ಅಭಯಂಕರ್ ಸಂಗೀತ ನೀಡಿರುವ ಈ ಹಾಡನ್ನು ವಿಜಯ್ ಪ್ರಕಾಶ್ ಹಾಡಿದ್ದಾರೆ. ‘ಒಂದು ವರ್ಷ ವರ್ಕ್ ಶಾಪ್ ನಡೆಸಿ ಈ ಚಿತ್ರದ ಚಿತ್ರೀಕರಣ ಮಾಡಿದ್ದೇವೆ‌’ ಎಂದು ಮಾತು ಆರಂಭಿಸಿದ ನಿರ್ದೇಶಕ ಬಿ.ಆರ್ ರಾಜಶೇಖರ್, ‘ಈ ಚಿತ್ರದಲ್ಲಿ ಮನರಂಜನೆಗೇ ಆದ್ಯತೆ. ಎಲ್ಲರಿಗೂ ಕಾಲೇಜು ದಿನಗಳನ್ನು ನೆನಪಿಸುವ ಚಿತ್ರವಿದು. ಹೊಸ ಪ್ರತಿಭೆಗಳೇ ಹೆಚ್ಚಾಗಿ ಅಭಿನಯಿಸಿದ್ದಾರೆ’ ಎಂದರು. 

‘‘ಲವ್ ಮಾಕ್ಟೇಲ್–2’ ಚಿತ್ರದ ನಂತರ ನಾನು ಸಂಗೀತ ನೀಡುತ್ತಿರುವ ಚಿತ್ರವಿದು’ ಎಂದಿದ್ದಾರೆ ನಕುಲ್‌. ಚಿತ್ರದಲ್ಲಿ ಅರವಿಂದ್ ಕುಪ್ಳಿಕರ್, ರಂಜನ್ ನರಸಿಂಹಮೂರ್ತಿ, ಜತಿನ್ ಆರ್ಯನ್, ಆಕಾಶ್, ಶಶಾಂಕ್ ಸಿಂಹ, ಮಾನ್ಯ ಗೌಡ, ಕುಂಕುಮ್, ಅನುಶಾ ಸುರೇಶ್, ಮನೋಜ್ ಶೆಟ್ಟಿ, ನಮಿತಾ ಗೌಡ ಮುಂತಾದವರು ನಟಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT