ಭಾನುವಾರ, ಮೇ 9, 2021
19 °C

ಬದನವಾಳು: ಹೇಗಿದೆ ಗೊತ್ತಾ ಫಸ್ಟ್‌ಲುಕ್‌?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬದನವಾಳು ಗ್ರಾಮದ ಒಟ್ಟಾರೆ ಚಿತ್ರಣವನ್ನು ಕಟ್ಟಿಕೊಡಲು ಸಿದ್ಧವಾಗಿದೆ ಅದೇ ಹೆಸರಿನ ಚಿತ್ರ. ಸಾಮಾಜಿಕ ವ್ಯವಸ್ಥೆಯ ದಾರಿದ್ರ್ಯವನ್ನು ಬಿಂಬಿಸಲು ಚಿತ್ರದಲ್ಲಿ ಪ್ರಯತ್ನ ಮಾಡಲಾಗಿದೆ. ಚಿತ್ರದ ಫಸ್ಟ್‌ಲುಕ್‌ ಏ. 15ರಂದು ಬಿಡುಗಡೆ ಆಗಲಿದೆ.

ಜಾತಿ ವ್ಯವಸ್ಥೆ, ಮೇಲು-ಕೀಳು,ಅಸ್ಪೃಶ್ಯತೆಯಲ್ಲಿ ಅರಳುವ ಪ್ರೀತಿ, ಮಾನಸಿಕ ದಾರಿದ್ರ್ಯಕ್ಕೆ ಅಂಟಿಕೊಳ್ಳುವ ಪ್ರೇಮ ವೈಫಲ್ಯ, ರಾಜಕಾರಣಿಗಳು ಯುವ ಪಿಳಿಗೆಯನ್ನು ಅವರ ಸ್ವಾರ್ಥಕ್ಕಾಗಿ ಬಳಸಿಕೊಳ್ಳುವುದು, ದೇವರ ಹೆಸರಿನಲ್ಲಿ ನಡೆಯುತ್ತಿರುವ ಮೋಸ, ಹೀಗೆ ಹಲವಾರು ಪ್ರಮುಖ ಅಂಶಗಳನ್ನು ವಾಸ್ತವವಾಗಿ ಕಟ್ಟಿಕೊಡುವ ಕೆಲಸವನ್ನು ನಿರ್ದೇಶಕರು ಮಾಡಿದ್ದಾರೆ ಎಂದಿದೆ ಚಿತ್ರತಂಡ.

‘ಮೆಳೇಕೋಟೆ ಟೂರಿಂಗ್ ಟಾಕೀಸ್’ – ‘ಸಿನಿಮಾ ಮಾರ್ಕೆಟ್’ ಬ್ಯಾನರ್ ಅಡಿ ಚಿತ್ರ ನಿರ್ಮಾಣಗೊಳ್ಳುತ್ತಿದೆ. ಪಾರ್ವತಿ ಚಂದ್ರಶೇಖರ್, ಲೀಲಾವತಿ ಸುರೇಶ ಕುಮಾರ್ ಮತ್ತು ಪ್ರೇಮ ಚಂದ್ರಯ್ಯ (ನಾಗಸಂದ್ರ) ಚಿತ್ರದ ನಿರ್ಮಾಪಕರು. ರಾಜ್‌ ಮಂಜು ನಾಯಕ, ಬಿಂದುಶ್ರೀ ನಾಯಕಿ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು