ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬಘೀರ’ ಟೀಸರ್‌: ಶ್ರೀಮುರಳಿ ಜನ್ಮದಿನಕ್ಕೆ ಗಣ್ಯರಿಂದ ಶುಭಾಶಯಗಳ ಮಹಾಪೂರ...

Published 17 ಡಿಸೆಂಬರ್ 2023, 14:28 IST
Last Updated 17 ಡಿಸೆಂಬರ್ 2023, 14:28 IST
ಅಕ್ಷರ ಗಾತ್ರ

ಬೆಂಗಳೂರು: ರೋರಿಂಗ್‌ ಸ್ಟಾರ್‌ ಶ್ರೀಮುರಳಿ ಇಂದು (ಡಿಸೆಂಬರ್​ 17) ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ‘ಬಘೀರ’ ಚಿತ್ರತಂಡ ಟೀಸರ್‌ ಬಿಡುಗಡೆ ಮಾಡುವ ಮೂಲಕ ಶ್ರೀಮುರಳಿಗೆ ಜನ್ಮದಿನದ ಶುಭಾಶಯ ಕೋರಿದೆ.

ಕನ್ನಡ ಚಿತ್ರರಂಗದ ಗಣ್ಯರು ಹಾಗೂ ಅಭಿಮಾನಿಗಳು ಶ್ರೀಮುರಳಿಗೆ ಸಾಮಾಜಿಕ ಮಾಧ್ಯಮಗಳ ಮೂಲಕ ಜನ್ಮದಿನದ ಶುಭಾಶಯಗಳನ್ನು ಕೋರುತ್ತಿದ್ದಾರೆ. 

2021ರಲ್ಲಿ ತೆರೆಕಂಡ ‘ಮದಗಜ’ ಸಿನಿಮಾ ಬಳಿಕ ಶ್ರೀಮುರಳಿ ಅವರ ಯಾವುದೇ ಸಿನಿಮಾ ತೆರೆಕಂಡಿಲ್ಲ. ಇದೀಗ ‘ಬಘೀರ’ನಾಗಿ ತೆರೆ ಮೇಲೆ ಬರಲು ಶ್ರೀಮುರಳಿ ಸಜ್ಜಾಗಿದ್ದಾರೆ. ಈ ಸಿನಿಮಾ ಮೇಲೆ ಶ್ರೀಮುರಳಿ ಅಭಿಮಾನಿಗಳು ತುಂಬ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ‘ಬಘೀರ’ ಸಿನಿಮಾದ ಟೀಸರ್​ ಅದ್ದೂರಿಯಾಗಿ ಮೂಡಿಬಂದಿದೆ.

‘ಉಗ್ರಂ’ ಸಿನಿಮಾ ಬಳಿಕ ಪ್ರಶಾಂತ್‌ ನೀಲ್‌ ಹಾಗೂ ಶ್ರೀಮುರಳಿ ಕಾಂಬಿನೇಷನ್‌ನಲ್ಲಿ ಈ ಸಿನಿಮಾ ಮೂಡಿಬಂದಿದೆ. ‘ಬಘೀರ’ನಿಗೆ ನಟಿ ರುಕ್ಮಿಣಿ ವಸಂತ್‌ ಜೋಡಿಯಾಗಿದ್ದಾರೆ. 

ಡಾ. ಸೂರಿ ಆ್ಯಕ್ಷನ್‌ ಕಟ್‌ ಹೇಳಿರುವ ‘ಬಘೀರ’ ಚಿತ್ರವನ್ನು ಹೊಂಬಾಳೆ ಫಿಲ್ಮ್ಸ್‌ನಿರ್ಮಾಣ ಮಾಡಿದ್ದು, ಚಿತ್ರದಲ್ಲಿ ಪೊಲೀಸ್‌ ಅಧಿಕಾರಿ ಪಾತ್ರದಲ್ಲಿ ಶ್ರೀಮುರಳಿ ಕಾಣಿಸಿಕೊಂಡಿದ್ದಾರೆ. ನಿರ್ದೇಶಕ ಪ್ರಶಾಂತ್ ನೀಲ್ ಈ ಚಿತ್ರಕ್ಕೆ ಕಥೆ ಬರೆದಿದ್ದು, ಡಾ. ಸೂರಿ ಅವರ ಚಿತ್ರಕಥೆ ಈ ಸಿನಿಮಾವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT