ಪದ್ಮಜಾ ರಾವ್‌ಗೆ ಜಾಮೀನು

ಮಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಜಾಮೀನು ರಹಿತ ವಾರಂಟ್ ಜಾರಿಯಾಗಿದ್ದ ನಟಿ ಪದ್ಮಜಾ ರಾವ್ ಶುಕ್ರವಾರ ಮಂಗಳೂರಿನ 5ನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದರು.
₹4 ಲಕ್ಷ ಮೊತ್ತದ ಬಾಂಡ್, ₹40 ಸಾವಿರ ಠೇವಣಿ ಇರಿಸಬೇಕು. ನಿಯಮಿತವಾಗಿ ಕೋರ್ಟ್‌ಗೆ ಹಾಜರಾಗಬೇಕು ಎನ್ನುವ ಷರತ್ತಿನೊಂದಿಗೆ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿದ್ದಾರೆ.
ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ನನಗೆ ಕಾನೂನು, ನ್ಯಾಯಾಲಯದ ಮೇಲೆ ಭರವಸೆ ಇದೆ. ಈ ಪ್ರಕರಣದಲ್ಲಿ ನಾನು ಗೆದ್ದೇ ಗೆಲ್ಲುತ್ತೇನೆ ಎಂಬ ವಿಶ್ವಾಸವಿದೆ’ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.