ಮಂಗಳವಾರ, ಸೆಪ್ಟೆಂಬರ್ 28, 2021
20 °C

ಮೈಸೂರಿನತ್ತ ‘ಬೈರಾಗಿ’ ಚಿತ್ರ ತಂಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನಟ ಶಿವರಾಜ್‌ಕುಮಾರ್ ನಟನೆಯ 123ನೇ ಸಿನಿಮಾ ‘ಬೈರಾಗಿ’ ಚಿತ್ರದ ಚಿತ್ರೀಕರಣ ಅಂತಿಮ ಹಂತಕ್ಕೆ ತಲುಪಿದ್ದು, ಬಾಕಿ ಉಳಿದುಕೊಂಡಿರುವ ಹಾಡಿನ ಚಿತ್ರೀಕರಣಕ್ಕೆ ಸದ್ಯದಲ್ಲೇ ಮೈಸೂರಿಗೆ ಚಿತ್ರತಂಡ ತೆರಳಲಿದೆ.

ನಿರ್ದೇಶಕ ವಿಜಯ್ ಮಿಲ್ಟನ್ ನಿರ್ದೇಶನವಿರುವ ಈ ಚಿತ್ರದಲ್ಲಿ ಶಿವರಾಜ್‌ಕುಮಾರ್‌ ಹಲವು ಅವತಾರ ಎತ್ತಿದ್ದಾರೆ. ಈಗಾಗಲೇ  ಅವರ ಹುಲಿವೇಷ ಹಾಕಿರುವ ಮುಖದ ಪೋಸ್ಟರ್‌ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಟಗರು ಯಶಸ್ಸಿನ ಬಳಿಕ ಶಿವರಾಜ್‌ಕುಮಾರ್‌ ಹಾಗೂ ‘ಡಾಲಿ’ ಧನಂಜಯ್ ಒಟ್ಟಿಗೆ ಕಾಣಿಸಿಕೊಳ್ಳುತ್ತಿರುವ ಈ ಸಿನಿಮಾ ಮೇಲೆ ಜನರ ನಿರೀಕ್ಷೆ ಬಹಳಷ್ಟಿದೆ. ಶಿವರಾಜ್‌ಕುಮಾರ್‌ ಅವರ ಹುಲಿವೇಷದ ಗೆಟಪ್ ಎಲ್ಲೆಡೆ ವೈರಲ್ ಆಗಿದ್ದು, ಆಟೊ ಹಾಗೂ ಕಾರುಗಳ ಮೇಲೆ ಪೋಸ್ಟರ್‌ಗಳು ರಾರಾಜಿಸುತ್ತಿವೆ.

ಅಂಜಲಿ ಈ ಚಿತ್ರದ ನಾಯಕಿ. ‘ದಿಯಾ’ ಖ್ಯಾತಿಯ ಪೃಥ್ವಿ ಅಂಬರ್ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿದ್ದಾರೆ. ಹಿರಿಯ ನಟ ಶಶಿಕುಮಾರ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಕೃಷ್ಣ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಕೃಷ್ಣ ಸಾರ್ಥಕ್ ಅದ್ಧೂರಿಯಾಗಿ ನಿರ್ಮಿಸಿರುವ ಈ ಚಿತ್ರದಲ್ಲಿ ಸಾಕಷ್ಟು ನುರಿತ ಕಲಾವಿದರಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು