ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಜೇಮ್ಸ್‌’ ಪರದೆಯಲ್ಲಿ ‘ಬೈರಾಗಿ’ ಟೀಸರ್‌

Last Updated 13 ಮಾರ್ಚ್ 2022, 8:30 IST
ಅಕ್ಷರ ಗಾತ್ರ

‘ಜೇಮ್ಸ್‌’ನ ಎಲ್ಲ ಪರದೆಗಳಲ್ಲಿ ಕಾಣಿಸಲಿದ್ದಾನೆ ಬೈರಾಗಿ!...

ಇದು ಹೇಗೆ ಸಾಧ್ಯ?

ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ನಟನೆಯ 123ನೇ ಸಿನಿಮಾ ‘ಬೈರಾಗಿ’ ಇತ್ತೀಚೆಗಷ್ಟೇ ಶೂಟಿಂಗ್ ಮುಗಿಸಿದೆ. ಸದ್ಯ ಪೋಸ್ಟ್‌ ಪ್ರೊಡಕ್ಷನ್ ಹಂತದಲ್ಲಿರುವ ಈ ಚಿತ್ರದ ಟೀಸರ್ ಪುನೀತ್ ರಾಜ್‌ಕುಮಾರ್‌ ಹುಟ್ಟುಹಬ್ಬದ ಪ್ರಯುಕ್ತ ವಿಶೇಷವಾಗಿ ಬಿಡುಗಡೆ ಮಾಡಲು ‘ಬೈರಾಗಿ’ ತಂಡ ತೀರ್ಮಾನಿಸಿದೆ. ‘ಜೇಮ್ಸ್‌’ ಬಿಡುಗಡೆಯಾಗುವ ಎಲ್ಲಾ ಪರದೆಗಳಲ್ಲೂ ’ಬೈರಾಗಿ’ ದರ್ಶನವಾಗಲಿದೆಯಂತೆ.

ಪುನೀತ್ ಅವರ ಸವಿನೆನಪಿಗಾಗಿ ಈ ಟೀಸರ್ ರಿಲೀಸ್ ಮಾಡುತ್ತಿರುವುದಾಗಿ ಚಿತ್ರತಂಡ ಘೋಷಿಸಿದೆ. ‘ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ನಮ್ಮ ತಂಡದ ಜತೆ ಅಪ್ಪು ಒಡನಾಟವಿದೆ. ಹೀಗಾಗಿ ಅವರ ಹುಟ್ಟುಹಬ್ಬದ ಉಡುಗೊರೆಯಾಗಿ ‘ಬೈರಾಗಿ’ ಟೀಸರ್ ಬಿಡುಗಡೆ ಮಾಡುತ್ತಿದ್ದೇವೆ. ಇದು ಪುನೀತ್ ಹಾಗೂ ಶಿವಣ್ಣನ ಅಭಿಮಾನಿಗಳಿಗೆ ಸಂತಸದ ವಿಷಯ’ ಎಂಬಿದು ಚಿತ್ರತಂಡದ ಅನಿಸಿಕೆ.

ವಿಜಯ್ ಮಿಲ್ಟನ್‌ ನಿರ್ದೇಶನವಿರುವ ಈ ಚಿತ್ರಕ್ಕೆ ಕೃಷ್ಣ ಸಾರ್ಥಕ ‘ಕೃಷ್ಣ ಕ್ರಿಯೇಷನ್ಸ್’ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಮಾಡಿದ್ದಾರೆ. ‘ಟಗರು’ ಬಳಿಕ ‘ಡಾಲಿ’ ಧನಂಜಯ್ ಈ ಸಿನಿಮಾದಲ್ಲಿ ಶಿವರಾಜ್‌ಕುಮಾರ್ ಜತೆ ನಟಿಸಿದ್ದಾರೆ. ಹಿರಿಯ ನಟ ಶಶಿಕುಮಾರ್, ಅಂಜಲಿ, ಯಶ ಶಿವಕುಮಾರ್ ಸೇರಿದಂತೆ ದೊಡ್ಡ ತಾರಾಬಳಗವೇ ಕೂಡಿದೆ. ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿರುವ ಈ ಚಿತ್ರಕ್ಕೆ ಗುರು ಕಶ್ಯಪ್ ಸಂಭಾಷಣೆ ಬರೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT