ಕೆ.ಎಂ ಚೈತನ್ಯ ನಿರ್ದೇಶನದ ‘ಬಲರಾಮನ ದಿನಗಳು' ಚಿತ್ರದ ಟೀಸರ್ ಹಾಗೂ ಹಾಡು ಬಿಡುಗಡೆಯಾಗಿ ಪ್ರೇಕ್ಷಕರ ಗಮನ ಸೆಳೆದಿದೆ. ಈ ಸಿನಿಮಾದ ಟ್ರೇಲರ್ ಶೀಘ್ರದಲ್ಲೇ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ.

ಈ ಸಿನಿಮಾವನ್ನು ಕೆವಿಎನ್ ಪ್ರೊಡಕ್ಷನ್ಸ್ ವಿತರಣೆ ಮಾಡಲಿದೆ. ಪದ್ಮಾವತಿ ಫಿಲಂಸ್ ಬ್ಯಾನರ್ ಅಡಿಯಲ್ಲಿ ಪದ್ಮಾವತಿ ಜಯರಾಂ ಹಾಗೂ ಶ್ರೇಯಸ್ ಅವರು ಬಂಡವಾಳ ಹೂಡಿಕೆ ಮಾಡಿದ್ದಾರೆ. ಚಿತ್ರವು ವಿಶ್ವದಾದ್ಯಂತ ಜೂನ್ 26ರಂದು ಪ್ರದರ್ಶನಗೊಳ್ಳಲಿದೆ.

80ರ ದಶಕದ ಕಥೆ ಹೊಂದಿರುವ ‘ಬಲರಾಮನ ದಿನಗಳು' ಚಿತ್ರದಲ್ಲಿ ನಾಯಕನಾಗಿ ವಿನೋದ್ ಪ್ರಭಾಕರ್ ಹಾಗೂ ನಾಯಕಿಯಾಗಿ ಪ್ರಿಯಾ ಆನಂದ್ ನಟಿಸಿದ್ದಾರೆ.

‘ಆ ದಿನಗಳು‘ ಚಿತ್ರದಲ್ಲಿರುವ ಅತುಲ್ ಕುಲಕರ್ಣಿ, ಶರತ್ ಲೋಹಿತಾಶ್ವ, ಆಶೀಶ್ ವಿದ್ಯಾರ್ಥಿ ಹಾಗೂ ಬಿಗ್ ಬಾಸ್ ಖ್ಯಾತಿಯ ವಿನಯ್ ಗೌಡ ಸೇರಿ ಅನೇಕರು ಈ ಚಿತ್ರದಲ್ಲೂ ನಟಿಸಿದ್ದಾರೆ.

ಸಂತೋಷ್ ನಾರಾಯಣ್ ಅವರ ಸಂಗೀತ ಸಂಯೋಜನೆ, ಸಿ ವೇಣು ಅವರ ಛಾಯಾಗ್ರಹಣ, ಹರಿದಾಸ್ ಕೆ.ಜಿ.ಎಫ್ ಅವರ ಸಂಕಲನ ಈ ಚಿತ್ರಕ್ಕಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.