ಸೋಮವಾರ, ಮಾರ್ಚ್ 20, 2023
25 °C

ಪುನೀತ್ ರಾಜ್‌ಕುಮಾರ್‌ ಪುಣ್ಯಸ್ಮರಣೆ: ಸಿಎಂ ಬೊಮ್ಮಾಯಿ ಸೇರಿ ಅಭಿಮಾನಿಗಳಿಂದ ಗೌರವ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಟ, ದಿವಂಗತ ಪುನೀತ್ ರಾಜ್‌ಕುಮಾರ್‌ ಅವರ ಮೊದಲ ವರ್ಷದ ಪುಣ್ಯತಿಥಿ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಚಿತ್ರರಂಗದ ಗಣ್ಯರು ಗೌರವ ಸಲ್ಲಿಸಿದರು.

‘ಬಾಲನಟನಾಗಿ ಚಿತ್ರರಂಗ ಪ್ರವೇಶಿಸಿ, ಪವರ್ ಸ್ಟಾರ್ ಆಗಿ ಕನ್ನಡಿಗರ ಜನಮಾನಸದಲ್ಲಿ ಶಾಶ್ವತ ಸ್ಥಾನ ಪಡೆದಿರುವ  ಪ್ರೀತಿಯ ‘ಅಪ್ಪು’, ಡಾ. ಪುನೀತ್ ರಾಜ್‌ಕುಮಾರ್ ಅವರ ಪುಣ್ಯಸ್ಮರಣೆಯಂದು ಅವರಿಗೆ ಪ್ರೀತಿ ಪೂರ್ವಕ ನಮನಗಳು. ಅತಿ ಚಿಕ್ಕ ವಯಸ್ಸಿನಲ್ಲಿ ಅವರು ಮಾಡಿದ ಸಾಧನೆ, ಗಳಿಸಿದ ಜನಪ್ರಿಯತೆ, ಕೈಗೊಂಡ ಜನಸೇವೆಯನ್ನು ವರ್ಣಿಸಲು ಪದಗಳೇ ಸಾಲದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ. 

ಓದಿ... ಗಂಧದ ಗುಡಿ: ‘ವಿಶ್ವಮಾನವ’ನ ಕಣ್ತುಂಬಿಕೊಂಡ ಪ್ರೇಕ್ಷಕ!

‘ಜನಮಾನಸದಲ್ಲಿ ಚಿರಸ್ಥಾಯಿ ಆಗಿರುವ ನೆಚ್ಚಿನ ಕಲಾವಿದ, ನಮ್ಮೆಲ್ಲರ ಪ್ರೀತಿಯ ‘ಅಪ್ಪು’, ಪುನೀತ್ ರಾಜಕುಮಾರ್ ಅವರ ಪ್ರಥಮ ಪುಣ್ಯತಿಥಿಯಂದು ಅವರಿಗೆ ಭಾವಪೂರ್ಣ ನಮನಗಳು. ಅವರ ಕಲಾವಂತಿಕೆ, ಹೃದಯವಂತಿಕೆಯ ವ್ಯಕ್ತಿತ್ವ ಎಂದೆಂದಿಗೂ ಅಜರಾಮರ’ ಎಂದು ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಓದಿ... ‘ಗಂಧದಗುಡಿ’ ವಿಮರ್ಶೆ: ಕಾಡು ನೋಡಹೋದೆ ಕವಿತೆಯೊಡನೆ ಬಂದೆ

‘ಒಳ್ಳೆಯದನ್ನು ಬಯಸುವವರ ಮನಸ್ಸು, ಹೃದಯದಲ್ಲಿ ‘ಅಪ್ಪು’ ಇನ್ನೂ ಬದುಕಿದ್ದಾರೆ. ತಮ್ಮ ಕನಸಿನ ಗಂಧದಗುಡಿಯ ಮೂಲಕ ಅವರು ಪರಿಸರದಲ್ಲಿ ಲೀನವಾಗಿದ್ದಾರೆ. ನಿಮ್ಮನು ಪಡೆದ ನಾವು ನಿಜಕ್ಕೂ ಪುನೀತ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ. 

ಸಾಮಾಜಿಕ ಮಾಧ್ಯಮಗಳಲ್ಲಿ ಪುನೀತ್ ಅಭಿಮಾನಿಗಳು ಗೌರವ ಸಲ್ಲಿಸಿದ್ದಾರೆ. 

ನಟ ಪುನೀತ್‌ ರಾಜ್‌ಕುಮಾರ್‌ ಹೆಜ್ಜೆಹಾಕಿರುವ ಡಾಕ್ಯೂಫಿಲಂ ‘ಗಂಧದಗುಡಿ’ ಶುಕ್ರವಾರ ರಾಜ್ಯದಾದ್ಯಂತ 200ಕ್ಕೂ ಅಧಿಕ ಪರದೆಗಳಲ್ಲಿ ತೆರೆಕಂಡಿದೆ. ಅಮೋಘವರ್ಷ ನಿರ್ದೇಶನ, ಪಿಆರ್‌ಕೆ ಪ್ರೊಡಕ್ಷನ್ಸ್‌ನಡಿ ನಿರ್ಮಾಣಗೊಂಡಿರುವ ಈ ಚಿತ್ರಕ್ಕೆ ಪ್ರೇಕ್ಷರಿಂದ ಮೆಚ್ಚುಗೆ ವ್ಯಕ್ತವಾಗಿದೆ. 

2021ರ ಅಕ್ಟೋಬರ್ 29ರಂದು ಅಪ್ಪು ನಿಧನರಾದರು. ಈ ಕಾರಣಕ್ಕೆ ‘ಗಂಧದಗುಡಿ’ ಸಾಕ್ಷ್ಯಚಿತ್ರವನ್ನು ಅಕ್ಟೋಬರ್ 28ರಂದು ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿತ್ತು. 

ಓದಿ... ನೆನಪು | ಪುನೀತ್‌ ರಾಜ್‌ಕುಮಾರ್‌ ಮೊದಲ ಪುಣ್ಯಸ್ಮರಣೆ ಇಂದು: ಸದಾ ಮಿನುಗುವ ತಾರೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು