ಉತ್ತರ ಕರ್ನಾಟಕ ಪ್ರದೇಶವೊಂದರ ಕಥೆ ಹೊತ್ತ ನವೀನ್ ಶಂಕರ್ ನಟನೆಯ ‘ಕ್ಷೇತ್ರಪತಿ’ ಚಿತ್ರವು ಆಗಸ್ಟ್ 18ರಂದು ಬಿಡುಗಡೆಯಾಗುತ್ತಿದೆ. ಉತ್ತರ ಕರ್ನಾಟಕ ಸೊಗಡಿನ ರಗಡ್ ಕಥೆ ಇರುವ ‘ಬಯಲುಸೀಮೆ’ಯೂ ಅದೇ ದಿನ ಬಿಡುಗಡೆಯಾಗುತ್ತಿದೆ.
ಇತ್ತೀಚೆಗಷ್ಟೇ ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಷ್ ಅವರು ಈ ಚಿತ್ರದ ಟ್ರೈಲರ್ ಅನಾವರಣಗೊಳಿಸಿದ್ದಾರೆ. ಜವಾರಿ ಭಾಷೆಯ ಸಂಭಾಷಣೆ, ರಾಜಕೀಯ ಮೇಲಾಟದ ಸುತ್ತ ಚಿತ್ರದ ಕಥೆ ಸಾಗುತ್ತದೆ. ವರುಣ್ ಕಟ್ಟಿಮನಿ ಈ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳುವುದರ ಜೊತೆಗೆ ಚಿತ್ರದಲ್ಲಿ ನಾಯಕ ನಟನಾಗಿ ನಟಿಸಿದ್ದಾರೆ. ಸಂಯುಕ್ತ ಹೊರನಾಡು ನಾಯಕಿಯಾಗಿ ನಟಿಸಿದ್ದಾರೆ. ರವಿಶಂಕರ್, ಟಿ.ಎಸ್ ನಾಗಾಭರಣ, ಯಶ್ ಶೆಟ್ಟಿ, ಭವಾನಿ ಪ್ರಕಾಶ್, ಅರ್ಚನಾ ಕೊಟ್ಟಿಗೆ, ಲಕ್ಷ್ಮೀ ನಾಡಗೌಡರ್, ಸಂತೋಷ್ ಉಪ್ಪಿನ್, ನಾಗರಾಜ ಭಟ್, ಮಹೇಶ್ ದೊಡ್ಡಕಲ್ನವರ್, ಪ್ರದೀಪ್ ರಾಜ್ ಸೇರಿದಂತೆ ಬಹುದೊಡ್ಡ ತಾರಾಗಣ ಚಿತ್ರದಲ್ಲಿದೆ.
ಗಾಯಿತ್ರಿ ದೇವಿ ಕ್ರಿಯೇಷನ್ಸ್ ಮತ್ತು ಪಿಆರ್‌ಎಸ್ ಕ್ರಿಯೇಷನ್ಸ್ ಬ್ಯಾನರ್‌ನಡಿ ಲಕ್ಷ್ಮಣ್ ಸಾ ಶಿಂಗ್ರಿ, ಶ್ರೀಧರ್ ಬಿದರಳ್ಳಿ, ರಶ್ಮೀ ವರುಣ್ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಗಜೇಂದ್ರಗಡ, ಬೀಳಗಿ, ಮುಂಬೈನಲ್ಲಿ ಚಿತ್ರದ ಚಿತ್ರೀಕರಣ ನಡೆದಿದೆ. ಸುಜಯ್ ಕುಮಾರ್ ಬಾವಿಕಟ್ಟಿ ಛಾಯಾಚಿತ್ರಗ್ರಹಣ. ಮಾನಸಾ ಹೊಳ್ಳ ಸಂಗೀತ ನಿರ್ದೇಶನ, ಕಿರಣ್ ಕುಮಾರ್ ಸಂಕಲನ ಚಿತ್ರಕ್ಕಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.