ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂಗಾಳಿ ನಟ ಸೌಮಿತ್ರ ಚಟರ್ಜಿ ಆರೋಗ್ಯ ಸ್ಥಿತಿ ಗಂಭೀರ

Last Updated 25 ಅಕ್ಟೋಬರ್ 2020, 12:36 IST
ಅಕ್ಷರ ಗಾತ್ರ

ಕೋಲ್ಕತ್ತ: ಖ್ಯಾತ ಬಂಗಾಳಿ ನಟ ಸೌಮಿತ್ರ ಚಟರ್ಜಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಭಾನುವಾರ ವೈದ್ಯರು ತಿಳಿಸಿದ್ದಾರೆ.

85 ವರ್ಷದ ಚಟರ್ಜಿ ಅವರಿಗೆ ಅಕ್ಟೋಬರ್‌ 6ರಂದು ಕೋವಿಡ್ ದೃಢಪಟ್ಟಿತ್ತು. ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 24 ಗಂಟೆಗಳಲ್ಲಿ ಅವರ ಪ್ಲೇಟ್‌ಲೆಟ್‌ ಸಂಖ್ಯೆ ಮತ್ತಷ್ಟು ಕುಸಿದಿದ್ದು ಅವರು ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಕಳೆದ 20 ದಿನಗಳಿಂದಲೂ ಸೌಮಿತ್ರ ಚಟರ್ಜಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶ್ವಾಸಕೋಶ ಸೇರಿದಂತೆ ಹೃದಯ ಸಂಬಂಧಿ ಕಾಯಿಲೆಗಳು ಅವರಿಗೆ ಇಲ್ಲ ಎಂದು ವೈದ್ಯರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT