ಬೆಂಗಳೂರು: ನಟ ಚೇತನ್ ಸದಸ್ಯತ್ವ ರದ್ದು ಮಾಡುವಂತೆ ಆಗ್ರಹಿಸಿ ಚಲನಚಿತ್ರ ವಾಣಿಜ್ಯ ಮಂಡಳಿ ಎದುರು ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಬಣದಿಂದ ಪ್ರತಿಭಟನೆ ನಡೆಸಲಾಯಿತು.

ಪ್ರವೀಣ್ ಶೆಟ್ಟಿ ಹಾಗೂ ಸಾ.ರಾ ಗೋವಿಂದ್ ನೇತೃತ್ವದಲ್ಲಿ ಜಮಾಯಿಸಿದ ಕಾರ್ಯಕರ್ತರು, ಚೇತನ್ ವಿರುದ್ಧ ಘೋಷಣೆ ಕೂಗಿದರು.

‘ರಾಜ್ಕುಮಾರ್ ಅವರ ಬಗ್ಗೆ ಚೇತನ್ ಹೇಳಿಕೆ ನೀಡಿರುವುದು ಸರಿಯಲ್ಲ. ಮಹಾನ್ ನಾಯಕರ ಬಗ್ಗೆ ಮಾತನಾಡಿರುವುದು ಎಷ್ಟರ ಮಟ್ಟಿಗೆ ಸರಿ’ ಎಂದು ಪ್ರತಿಭಟನಕಾರರು ಪ್ರಶ್ನಿಸಿದರು.

ಕೂಡಲೇ ವಾಣಿಜ್ಯ ಮಂಡಳಿ ಸಭೆ ಸೇರಿ, ಅವರ ಸದಸ್ಯತ್ವ ರದ್ದುಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದರು.

‘ನಾವು ರಾಜ್ಕುಮಾರ್ ಅವರನ್ನು ಒಬ್ಬ ಮಹಾನ್ ಕಲಾವಿದರಾಗಿ ಗೌರವಿಸುತ್ತೇವೆ. ಆದರೆ, ಬೆಂಗಳೂರು ನಗರದ ಮಧ್ಯದಲ್ಲಿ, 2006ರಲ್ಲಿ ಒಬ್ಬ ನಟನ ಸಮಾಧಿ ಕಾಂಪ್ಲೆಕ್ಸ್ಗಾಗಿ 2.5 ಎಕರೆ ಭೂಮಿಯನ್ನು ನೀಡುವುದು ತಿಳಿವಳಿಕೆಯ ನಿರ್ಧಾರವಾಗಿತ್ತೇ ಎಂಬುದನ್ನು ಪ್ರಶ್ನಿಸಬೇಕಾಗಿದೆ’ ಎಂದು ಚೇತನ್ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.

‘ಬೆಂಕಿ ಹಚ್ಚುವ ಕೆಲಸ’: ‘ಚೇತನ್ ಮಾತನಾಡಿರುವುದು ತಪ್ಪು. ಅವರಿಗೆ ರಾಜ್ಕುಮಾರ್ ಅವರ ಬಗ್ಗೆ ಮಾತನಾಡಲು ಯಾವ ಅಧಿಕಾರವೂ ಇಲ್ಲ. ಉದ್ವಿಗ್ನ ಸ್ಥಿತಿ ಉಂಟಾಗಲಿ ಎಂದು ಈ ರೀತಿ ಮಾಡುತ್ತಿದ್ದಾರೆ. ಬೆಂಕಿ ಹಚ್ಚುವ ಕೆಲಸವನ್ನು ಮಾಡಿದ್ದಾರೆ’ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷೆ ಜಯಮಾಲಾ ಹೇಳಿದ್ದಾರೆ.

ರಕ್ಷಣಾ ವೇದಿಕೆ ಮನವಿ ಸ್ವೀಕರಿಸಿ ಮಾತನಾಡಿದ ಅವರು, ‘ಚೇತನ್ ಒಂದೊಂದು ಸಲ ಒಂದೊಂದು ಹೇಳಿಕೆ ನೀಡುತ್ತಿದ್ದಾರೆ. ಅವರ ಬಗ್ಗೆ ಬಹಳ ಕೋಪವಿದೆ. ಅವರು ಭಾರತೀಯ ಪೌರತ್ವ ಹೊಂದಿದವರಲ್ಲ. ಸರ್ಕಾರಕ್ಕೆ ಪತ್ರ ಬರೆದು ಚೇತನ್ ಅವರನ್ನು ಗಡಿಪಾರು ಮಾಡಲು ಮನವಿ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಜಿ.ಪರಮೇಶ್ವರ ಜೊತೆ ಮಾತನಾಡುತ್ತೇವೆ. ಶೀಘ್ರದಲ್ಲಿಯೇ ಚೇತನ್ ಅವರನ್ನೂ ಕರೆಯಿಸಿ ಮಾತನಾಡುತ್ತೇವೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.