ಬೆಂಗಳೂರಿನ ಆಟೊ ಚಾಲಕರ ಕುರಿತಾದ ಕಥೆಯನ್ನು ಹೊಂದಿರುವ ‘ದೊಡ್ಮನ್ಸ’ ಚಿತ್ರದ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದೆ. ಬಹುತೇಕ ಹೊಸಬರಿಂದಲೇ ಕೂಡಿರುವ ಚಿತ್ರಕ್ಕೆ ಶರತ್ ಕೃಷ್ಣ ಆ್ಯಕ್ಷನ್ ಕಟ್ ಹೇಳಿದ್ದಾರೆ. ಜತೆಗೆ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ.

‘ಸಾಮಾನ್ಯ ಆಟೊ ಚಾಲಕನೊಬ್ಬ ಜೀವನದಲ್ಲಿ ಹೇಗೆ ದೊಡ್ಡ ಮನುಷ್ಯನಾಗುತ್ತಾನೆ? ಅದಕ್ಕೆ ಕಾರಣವೇನು? ಎಂಬುದೇ ಚಿತ್ರದ ಕಥೆ. ಮಾಸ್, ಆ್ಯಕ್ಷನ್ನೊಂದಿಗೆ ಮನರಂಜಿಸುವ ಚಿತ್ರ. ಚಿತ್ರೀಕರಣ ಮುಗಿದು ಪೋಸ್ಟ್ ಪ್ರೊಡಕ್ಷನ್ ಹಂತದಲ್ಲಿದೆ. ಶೀಘ್ರದಲ್ಲಿಯೇ ಬಿಡುಗಡೆ ದಿನಾಂಕ ಘೋಷಿಸುತ್ತೇವೆ’ ಎಂದರು ನಿರ್ದೇಶಕ.

ರೇಷ್ಮಾ ಲಿಂಗರಾಜಪ್ಪ ನಾಯಕಿ. ಹುಲಿ ಕಾರ್ತಿಕ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ‘ಶರತ್ ಕೃಷ್ಣ ಇಡೀ ಸಿನಿಮಾವನ್ನು ತಮ್ಮ ಹೆಗಲ ಮೇಲೆ ಹೊತ್ತುಕೊಂಡು ಹೋಗಿದ್ದಾರೆ. ಸಿನಿಮಾದ ಆರಂಭದಿಂದ ಅಂತ್ಯದವರೆಗೂ ಈ ಚಿತ್ರತಂಡದ ಪ್ರಯಾಣದಲ್ಲಿ ಜತೆಯಾಗಿದ್ದು, ಏಳು-ಬೀಳುಗಳನ್ನು ಹತ್ತಿರದಿಂದ ಕಂಡಿದ್ದೇನೆ. ಈ ಸಿನಿಮಾ ಖಂಡಿತವಾಗಿಯೂ ಪ್ರೇಕ್ಷಕರಿಗೆ ಇಷ್ಟವಾಗಲಿದೆ’ ಎಂದರು ಕಾರ್ತಿಕ್.

ಚಿತ್ರದಲ್ಲಿ ಒಟ್ಟು ಐದು ಹಾಡುಗಳಿದ್ದು, ಶ್ರೀಧರ ಕಶ್ಯಪ್ ಮತ್ತು ಅಲೆಕ್ಸ್ ಸಂಗೀತ ಸಂಯೋಜಿಸಿದ್ದಾರೆ. ಆನಂದ ಇಳಯರಾಜ ಛಾಯಾಚಿತ್ರಗ್ರಹಣ, ವೇದಿಕ್ ಸಂಕಲನ ಚಿತ್ರಕ್ಕಿದೆ. ‘ವೇದಿಕ್ ಕಾಸ್ಮೋಸ್’ ಬ್ಯಾನರಿನಲ್ಲಿ ವೇದಿಕ್ ವೀರ್ ಬಂಡವಾಳ ಹೂಡಿದ್ದು, ಬೆಂಗಳೂರು, ಅಹಮದಾಬಾದ್ ಸುತ್ತಮುತ್ತ ಚಿತ್ರೀಕರಣಗೊಂಡಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-51-491956092

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.