ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಲಾಂಛನ ಬಿಡುಗಡೆ

Last Updated 28 ಡಿಸೆಂಬರ್ 2018, 7:20 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ11ನೇ ಆವೃತ್ತಿಯ ಲಾಂಛನವನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಶುಕ್ರವಾರ ಬಿಡುಗಡೆ ಮಾಡಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘2019ರ ಫೆ.7ರಿಂದ 14ರವರೆಗೆ ಚಲನಚಿತ್ರೋತ್ಸವ ನಡೆಯಲಿದೆ. ವಿಶ್ವದ ವಿವಿಧ ಭಾಷೆಗಳ 200ಕ್ಕೂ ಹೆಚ್ಚು ಚಿತ್ರಗಳು ಪ್ರದರ್ಶನ ಕಾಣಲಿವೆ. 7000ಕ್ಕೂ ಅಧಿಕ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ’ಎಂದರು.

‘ನಗರದ ಒರಾಯನ್ ಮಾಲ್‌ನ11 ಪರದೆಗಳಲ್ಲಿ ಚಿತ್ರಗಳು ಪ್ರದರ್ಶನಗೊಳ್ಳಲಿವೆ. ಚಲನಚಿತ್ರೋತ್ಸವ ಸಂಘಟನಾ ಸಮಿತಿಯು ಚಲನಚಿತ್ರೋತ್ಸವದಲ್ಲಿ ಗುಣಾತ್ಮಕ ಚಿತ್ರಗಳ ಪ್ರದರ್ಶನಕ್ಕೆ ಆದ್ಯತೆ ನೀಡುವ ಹಾಗೂ ವೆಚ್ಚ ಕಡಿಮೆಗೊಳಿಸುವ ಉದ್ದೇಶವನ್ನು ಹೊಂದಿದೆ’ಎಂದರು.

ರಾಜ್ಯ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ನಾಗತಿಹಳ್ಳಿ ಚಂದ್ರಶೇಖರ, ‘ಇನ್ನು ಪ್ರತಿವರ್ಷ ಫೆಬ್ರುವರಿ ತಿಂಗಳ ಮೊದಲ ಗುರುವಾರದಂದು ಚಲನಚಿತ್ರೋತ್ಸವ ಆರಂಭವಾಗಲಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಪಡೆಯಲು ಇದರಿಂದ ಅನುಕೂಲ ಆಗಲಿದೆ. ನಿರ್ದಿಷ್ಟ ವೇಳಾಪಟ್ಟ ಹೊಂದುವುರಿಂದ ಸಿನಿಮಾ ಆಸಕ್ತರು ಭಾಗವಹಿಸುವುದಕ್ಕೂ ಅನುಕೂಲ’ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT