ಬೆಂಗಳೂರು: 17ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ ಜನವರಿ 29ರಿಂದ ಫೆಬ್ರುವರಿ 6 ರವರೆಗೆ ನಡೆಯಲಿದೆ. ಹಿರಿಯ ನಟ ಪ್ರಕಾಶ್ ರಾಜ್ ಅವರು ಈ ಚಲನಚಿತ್ರೋತ್ಸವ ರಾಯಭಾರಿಯಾಗಿ ಆಯ್ಕೆಯಾಗಿದ್ದಾರೆ.

ವಿಧಾನಸೌಧ ಸಮಿತಿ ಸಭಾಂಗಣದಲ್ಲಿ ಚಲನಚಿತ್ರೋತ್ಸವ ಕುರಿತು ಪೂರ್ವಭಾವಿ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದರು.

ಚಲನಚಿತ್ರೋತ್ಸವದ ಉದ್ಘಾಟನೆ ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ನಡೆಯಲಿದೆ. ಚಿತ್ರೋತ್ಸವದ ಚಲನಚಿತ್ರ ಪ್ರದರ್ಶನ ರಾಜಾಜಿನಗರದ ಲುಲುಮಾಲ್ನಲ್ಲಿರುವ ಸಿನಿ ಪೊಲಿಸ್ನಲ್ಲಿರುವ 11 ಪರದೆಗಳಲ್ಲಿ ನಡೆಯಲಿದೆ ಎಂದು ಹೇಳಿದರು.

ಚಿತ್ರೋತ್ಸವದಲ್ಲಿ ಏಷಿಯನ್, ಭಾರತೀಯ ಮತ್ತು ಕನ್ನಡ ಸಿನಿಮಾ ಸ್ಪರ್ಧಾತ್ಮಕ ವಿಭಾಗಗಳಿಗೆ ಚಲನಚಿತ್ರಗಳ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಮೂರು ಸ್ಪರ್ಧಾತ್ಮಕ ವಿಭಾಗಗಳಿಗೆ ಇದುವರೆಗೆ 110 ಕ್ಕೂ ಹೆಚ್ಚು ಚಲನಚಿತ್ರಗಳು ಸಲ್ಲಿಕೆಯಾಗಿವೆ. ಸ್ಮರ್ಧಾತ್ಮಕ ವಿಭಾಗಗಳ ಅರ್ಜಿ ಸಲ್ಲಿಕೆಗೆ ಡಿಸೆಂಬರ್ 11 ಕಡೆಯ ದಿನ ಎಂದು ಅವರು ತಿಳಿಸಿದರು.

ಚಲನ ಚಿತ್ರಗಳ ಪ್ರದರ್ಶನ ಲುಲುಮಾಲ್ ಅಲ್ಲದೇ, ಚಾಮರಾಜಪೇಟೆಯಲ್ಲಿರುವ ಕಲಾವಿದರ ಸಂಘದ ಡಾ.ರಾಜ್ಕುಮಾರ್ ಭವನ, ಬನಶಂಕರಿಯಲ್ಲಿರುವ ಸುಚಿತ್ರ ಫಿಲಂ ಸೊಸೈಟಿಗಳಲ್ಲೂ ಪ್ರದರ್ಶನ ನಡೆಯಲಿದೆ. ಕನ್ನಡ ಮತ್ತು ಭಾರತೀಯ ಚಿತ್ರಗಳು ಸೇರಿದಂತೆ ಒಟ್ಟಾರೆ 60 ಕ್ಕೂ ಹೆಚ್ಚು ದೇಶಗಳ 200 ಚಲನಚಿತ್ರಗಳ 400 ಕ್ಕೂ ಹೆಚ್ಚು ಪ್ರದರ್ಶನ ನಡೆಯಲಿವೆ ಎಂದರು.

ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡ ದೇಶ– ವಿದೇಶಗಳ ಚಲನಚಿತ್ರಗಳೂ ಪ್ರದರ್ಶಿತಗೊಳ್ಳಲಿವೆ. ಅಲ್ಲದೇ, ಈ ಬಾರಿಯ ಆಸ್ಕರ್ ಪ್ರಶಸ್ತಿಗೆ ಶಾರ್ಟ್ ಲಿಸ್ಟ್ ಆಗಿರುವ ವಿವಿಧ ದೇಶಗಳ ಅತ್ಯುತ್ತಮ ಚಲನಚಿತ್ರಗಳೂ ಪ್ರದರ್ಶನಗೊಳ್ಳಲಿವೆ ಎಂದು ಸಿದ್ದರಾಮಯ್ಯ ಹೇಳಿದರು.

ಕನ್ನಡ ಚಿತ್ರರಂಗದ 91 ವರ್ಷಗಳ ವರ್ಣರಂಜಿತ, ಸ್ಮರಣೀಯ ಸಿನಿಮಾ ಸಂಸ್ಕೃತಿ ಇತಿಹಾಸದ ಮೈಲಿಗಲ್ಲುಗಳನ್ನು ಬಿಂಬಿಸುವ ಛಾಯಾಚಿತ್ರ ಪ್ರದರ್ಶನವನ್ನೂ ಏರ್ಪಡಿಸಲಾಗುತ್ತದೆ ಎಂದರು.

ಈ ಚಿತ್ರೋತ್ಸವಕ್ಕೆ ಅಗತ್ಯವಿರುವ ₹7 ಕೋಟಿ ಅನುದಾನ ಒದಗಿಸಲಾಗಿದೆ ಎಂದೂ ಸಿದ್ದರಾಮಯ್ಯ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.