ಬುಧವಾರ, ಸೆಪ್ಟೆಂಬರ್ 29, 2021
20 °C

ಕೂದಲು ಪರೀಕ್ಷೆ ವರದಿ ಸಿಸಿಬಿಗೆ: ರಾಗಿಣಿ, ಸಂಜನಾ ಡ್ರಗ್ಸ್ ಸೇವಿಸಿದ್ದು ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅಂತರರಾಷ್ಟ್ರೀಯ ಡ್ರಗ್ಸ್  ಪ್ರಕರಣದಲ್ಲಿ ಈ ಹಿಂದೆ ಬಂಧಿಸಲಾಗಿದ್ದ ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಹಾಗೂ ಇತರರ ಕೂದಲು ಮಾದರಿ ವರದಿ ಸಿಸಿಬಿ ಅಧಿಕಾರಿಗಳ ಕೈ ಸೇರಿದೆ.

ಆರೋಪಿಗಳನ್ನು‌ ಬಂಧಿಸಿದ್ದ ಸಿಸಿಬಿ ಪೊಲೀಸರು, ಮಾದಕ ವಸ್ತು ಸೇವನೆ  ಪತ್ತೆ ಮಾಡಲು ಎಲ್ಲರ ಕೂದಲು ಮಾದರಿ ಸಂಗ್ರಹಿಸಿ ಹೈದರಾಬಾದ್ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿದ್ದರು. ಆದರೆ, ಮೊದಲ ಬಾರಿ ಕಳುಹಿಸಿದ್ದ ಕೂದಲು ಮಾದರಿ ವಾಪಸು ಬಂದಿತ್ತು. ಅವೈಜ್ಞಾನಿಕ ಮಾದರಿ ಎಂದು ವಿಧಿವಿಜ್ಞಾನ ತಜ್ಞರು ಅಭಿಪ್ರಾಯಪಟ್ಟಿದ್ದರು.

ಹೀಗಾಗಿ, ಎರಡನೇ ಬಾರಿ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಇದೀಗ ಅದರ ವರದಿ ಬಂದಿದೆ.

'ರಾಗಿಣಿ, ಸಂಜನಾ ಹಾಗೂ ಇತರೆ ಕೆಲ ಆರೋಪಿಗಳು ಡ್ರಗ್ಸ್ ಸೇವನೆ ಮಾಡಿದ್ದು ವರದಿಯಿಂದ ಗೊತ್ತಾಗಿದೆ. ಇದೇ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು' ಎಂದು ಸಿಸಿಬಿ‌ ಮೂಲಗಳು ಹೇಳಿವೆ.

ಹಲವು ದಿನ ಜೈಲು ವಾಸ ಅನುಭವಿಸಿದ್ದ ನಟಿಯರು ಹಾಗೂ ಇತರರು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ.

ಇದನ್ನೂ ಓದಿ... Sandalwood: ಮತ್ತೆ ಮೋಡಿ ಮಾಡಿದ ಸುದೀಪ್‌ ಹೇರ್‌ಸ್ಟೈಲ್

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು