ಕಳೆದ ನ.15ರಂದು ತೆರೆಕಂಡಿದ್ದ ನಟ ಶಿವರಾಜ್ಕುಮಾರ್ ನಟನೆಯ ‘ಭೈರತಿ ರಣಗಲ್’ ಸಿನಿಮಾ ಇಂದು (ಡಿ.25) ಅಮೆಜಾನ್ ಪ್ರೈಂನಲ್ಲಿ ಬಿಡುಗಡೆಯಾಗಿದೆ.

ನರ್ತನ್ ಆ್ಯಕ್ಷನ್ ಕಟ್ ಹೇಳಿರುವ ಈ ಸಿನಿಮಾ ‘ಮಫ್ತಿ’ ಸಿನಿಮಾದ ಪ್ರೀಕ್ವೆಲ್. ಸಿನಿಮಾವನ್ನು ‘ಗೀತಾ ಪಿಕ್ಚರ್ಸ್’ ಲಾಂಛನದಡಿ ಗೀತಾ ಶಿವರಾಜ್ಕುಮಾರ್ ಅವರು ನಿರ್ಮಾಣ ಮಾಡಿದ್ದಾರೆ. ‘ವೇದ’ ಸಿನಿಮಾ ಬಳಿಕ ಗೀತ ಅವರು ನಿರ್ಮಾಣ ಮಾಡುತ್ತಿರುವ ಎರಡನೇ ಸಿನಿಮಾ ಇದಾಗಿದೆ.

ಇತ್ತೀಚೆಗಷ್ಟೇ 25 ದಿನಗಳನ್ನು ಪೂರೈಸಿದ್ದ ಈ ಸಿನಿಮಾ ವರ್ಷದ ಹಿಟ್ ಚಿತ್ರಗಳಲ್ಲಿ ಒಂದಾಗಿದೆ. ಎರಡು ಶೇಡ್ಗಳಲ್ಲಿ ಶಿವರಾಜ್ಕುಮಾರ್ ಅವರು ಈ ಚಿತ್ರದಲ್ಲಿ ಕಾಣಿಸಿಕೊಂಡಿದ್ದು, ಚಿತ್ರದಲ್ಲಿ ನಾಯಕಿಯಾಗಿ ರುಕ್ಮಿಣಿ ವಸಂತ್ ನಟಿಸಿದ್ದು, ರಾಹುಲ್ ಬೋಸ್, ಅವಿನಾಶ್, ಗೋಪಾಲಕೃಷ್ಣ ದೇಶಪಾಂಡೆ, ಶಬೀರ್ ಚಿತ್ರದ ತಾರಾಬಳಗದಲ್ಲಿದ್ದಾರೆ. ‘ಮಫ್ತಿ’ಯ ಪ್ರೀಕ್ವೆಲ್ ಆಗಿರುವ ‘ಭೈರತಿ ರಣಗಲ್’ ಸಿನಿಮಾದ ಸೀಕ್ವೆಲ್ ಕೂಡಾ ಬರಲಿದ್ದು, ಇದರೊಂದಿಗೆ ಕಥೆಗೊಂದು ಅಂತ್ಯ ಸಿಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.