ಶುಕ್ರವಾರ, ಜುಲೈ 30, 2021
28 °C

ಭಜರಂಗಿ 2 ಟೀಸರ್ ಬಿಡುಗಡೆ: ಶಿವರಾಜ್‌ಕುಮಾರ್ ಹುಟ್ಟುಹಬ್ಬಕ್ಕೆ ಉಡುಗೊರೆ

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

Twitter Post Screengrab

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್‌ಗೆ ಸೋಮವಾರ ಹುಟ್ಟುಹಬ್ಬದ ಸಂಭ್ರಮ.

ಚಂದನವನದಲ್ಲಿ ತಮ್ಮ ವಿಶಿಷ್ಟ ಶೈಲಿಯ ಅಭಿನಯದಿಂದ ಅಭಿಮಾನಿಗಳ ಮನಸ್ಸು ಗೆದ್ದಿರುವ ನಟ ಶಿವರಾಜ್‌ಕುಮಾರ್ ಅವರಿಗೆ ಜಯಣ್ಣ ಫಿಲಂಸ್ ಕಡೆಯಿಂದ ಹುಟ್ಟುಹಬ್ಬದ ವಿಶೇಷ ಉಡುಗೊರೆ ಲಭಿಸಿದೆ.

‘ಭಜರಂಗಿ 2’ ಸಿನಿಮಾದ 4K ಟೀಸರ್ ಅನ್ನು ಜಯಣ್ಣ ಫಿಲಂಸ್ ಬಿಡುಗಡೆ ಮಾಡಿದೆ. ಎ. ಹರ್ಷ ನಿರ್ದೇಶನದ ಭಜರಂಗಿ 2 ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತವಿದ್ದು, ನಾಯಕನ ಪಾತ್ರದಲ್ಲಿ ಶಿವರಾಜ್‌ಕುಮಾರ್ ಅಭಿನಯಿಸಿದ್ದರೆ, ಭಾವನ ಮೆನನ್ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಜಯಣ್ಣ ಮತ್ತು ಭೋಗೇಂದ್ರ ‘ಭಜರಂಗಿ 2’ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

ಶಿವರಾಜ್‌ಕುಮಾರ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳು ಮತ್ತು ಚಿತ್ರರಂಗದ ಪ್ರಮುಖರು ಶುಭಹಾರೈಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು