ಶುಕ್ರವಾರ, ಡಿಸೆಂಬರ್ 3, 2021
20 °C

ಭಜರಂಗಿ 2 ಟ್ರೈಲರ್ ಬಿಡುಗಡೆ: ಫ್ಯಾಂಟಸಿಯಲ್ಲಿ ಮೋಡಿ ಮಾಡಿದ ಶಿವಣ್ಣ

ಪ್ರಜಾವಾಣಿ ವೆಬ್‌ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್‌ಗೆ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಭಜರಂಗಿ 2' ಟ್ರೈಲರ್ ಬಿಡುಗಡೆಯಾಗಿದ್ದು, ಯೂಟ್ಯೂಬ್‌ನಲ್ಲಿ ಸಂಚಲನ ಸೃಷ್ಟಿಸಿದೆ. ಆನಂದ್ ಆಡಿಯೊ ಯೂಟ್ಯೂಬ್‌ ಚಾನೆಲ್‌ನಲ್ಲಿ ಟ್ರೈಲರ್‌ ಲಭ್ಯವಿದೆ.

ಫ್ಯಾಂಟಸಿ ಸ್ವರೂಪದ ಮೇಕಿಂಗ್ ಹಾಗೂ ವಿಶೇಷ ಸೆಟ್‌ಗಳಿಂದ ಕಂಗೊಳಿಸುತ್ತಿರುವ ಚಿತ್ರದ ಟ್ರೈಲರ್‌ನಲ್ಲಿ ಹಿನ್ನೆಲೆ ಸಂಗೀತ ಅದ್ಭುತವಾಗಿ ಮೂಡಿ ಬಂದಿದೆ. ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಒಂದು ಮಿಲಿಯನ್‌ಗೂ ಅಧಿಕ ವೀಕ್ಷಣೆ ಕಂಡಿದೆ. ಶಿವರಾಜ್‌ಕುಮಾರ್, ಭಾವನಾ ಮೆನನ್ ಹಾಗೂ ಸೌರವ್ ಲೊಕೇಶ್ ಅವರ ಪಾತ್ರಗಳು ಚಿತ್ರದ ಬಗ್ಗೆ ಕುತೂಹಲ ಹೆಚ್ಚಿಸಿವೆ.

ಜಯಣ್ಣ ಫಿಲಂಸ್‌ ನಿರ್ಮಿಸಿರುವ ‘ಭಜರಂಗಿ 2‘ ಇದೇ ದೀಪಾವಳಿ ಸಂದರ್ಭದಲ್ಲಿ ಅಕ್ಟೋಬರ್ 29 ಕ್ಕೆ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

 

ಎ. ಹರ್ಷ ನಿರ್ದೇಶನದ ಭಜರಂಗಿ 2 ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತವಿದ್ದು, ನಾಯಕನ ಪಾತ್ರದಲ್ಲಿ ಶಿವರಾಜ್‌ಕುಮಾರ್ ಅಭಿನಯಿಸಿದ್ದರೆ, ಭಾವನ ಮೆನನ್ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಭಜರಂಗಿ 1 ರಲ್ಲಿ ಮೋಡಿ ಮಾಡಿದ್ದ ಭಜರಂಗಿ ಲೋಕಿ ಖಳಪಾತ್ರದಲ್ಲಿ ಆರ್ಭಟಿಸಲಿದ್ದಾರೆ.

ಇದನ್ನೂ ಓದಿ: ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡುತ್ತಿದೆ ಕೋಟಿಗೊಬ್ಬ 3: ಕಲೆಕ್ಷನ್ ವಿವರ ಇಲ್ಲಿದೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು