ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

9ಕ್ಕೆ ಬರಲಿದೆ ‘ಭರವಸೆಯ ಬದುಕು’

Last Updated 7 ಜೂನ್ 2021, 16:41 IST
ಅಕ್ಷರ ಗಾತ್ರ

ಕೋವಿಡ್‌ ಸಂಕಷ್ಟದ ಕಾಲದಲ್ಲಿ ಒಂದಿಷ್ಟು ಭರವಸೆ ಮೂಡಿಸುವ ಪ್ರಯತ್ನಕ್ಕೆ ಮುಂದಾಗಿದೆ ‘ಫಾರ್‌ ರಿಜಿಸ್ಟ್ರೇಷನ್‌’ ಚಿತ್ರದ ನಿರ್ದೇಶಕ ನವೀನ್‌ ದ್ವಾರಕಾನಾಧ್‌. ಆಲಾಪ್‌ ಕ್ರಿಯೇಷನ್ಸ್‌ ನಿರ್ಮಾಣ ಸಂಸ್ಥೆ ಅಡಿ ಸಿದ್ಧವಾಗಿದೆ ವಿಡಿಯೋ ಹಾಡು ‘ಭರವಸೆಯ ಬದುಕು’.

‘ಸಾಕು ಇನ್ನು ಸಾಕು ಬರಿ ದೂಷಣೆಯ ನಿಲ್ಲಿಸಿರಿ ಸಾಕು’ ಸಾಲುಗಳ ಗೀತೆ ಜೂನ್‌ 9ರಂದು ಆನಂದ್‌ ಆಡಿಯೋದ ಯುಟ್ಯೂಬ್‌ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಈ ಹಾಡಿಗೆ ಚಂದನವನ ಹಾಗೂ ರಂಗಭೂಮಿ ಕಲಾವಿದರು ಸಾಥ್ ನೀಡಿದ್ದಾರೆ.

‘ಕೋವಿಡ್‌ ಸಂಕಟ, ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಈಗಾಗಲೇ ಅದೆಷ್ಟೋ ಮನಸ್ಸುಗಳು ನಕಾರಾತ್ಮಕ ಆಲೋಚನೆಯಲ್ಲಿ ಭರವಸೆಯನ್ನು ಕಳೆದುಕೊಂಡಿವೆ. ಹಲವರು ಮಾನಸಿಕ ಒತ್ತಡ ಅನುಭವಿಸುತ್ತಿದ್ದಾರೆ. ಇದು ಜನರ ಆತ್ಮವಿಶ್ವಾಸ ಕುಂದುತ್ತಿದೆ. ಈ ನಿಟ್ಟಿನಲ್ಲಿ ಶ್ರೀಸಾಮಾನ್ಯರಲ್ಲಿ ಸಕಾರಾತ್ಮಕ ಆಲೋಚನೆ ಬೆಳೆಸಲು, ಆತ್ಮವಿಶ್ವಾಸ ತುಂಬಲು ಹಾಗೂ ಭರವಸೆ ಮೂಡಿಸಲೆಂದೇ ಈ ಗೀತೆಯನ್ನು ನಿರ್ದೇಶಿಸಲು ಮುಂದಾದೆ’ ಎನ್ನುತ್ತಾರೆ ನಿರ್ದೇಶಕರಾದ ನವೀನ್ ದ್ವಾರಕನಾಥ್.

ಅನಿರುದ್ಧ ಜಟ್ಕರ್, ಚಂದನ್ ಶರ್ಮಾ, ಪ್ರಥ್ವಿ ಅಂಬರ್, ಸಿಂಪಲ್ ಸುನಿ, ವಸಿಷ್ಠ ಸಿಂಹ, ಸೋನು ಗೌಡ, ನಾಗೇಂದ್ರ ಪ್ರಸಾದ್, ಪಿ.ಡಿ.ಸತೀಶ್ ಚಂದ್ರ, ಕೃಷಿ ತಾಪಂಡ, ಹರ್ಷಿಕಾ ಪೂಣಚ್ಚ, ರಂಜಿನಿ ರಾಘವನ್, ರಘು ರಾಮನಕೊಪ್ಪ, ರೆಮೋ, ಜೈ ರಾಮ್ ಕಾರ್ತಿಕ್, ಕಿಶನ್ ಬೆಳಗಲಿ, ನವೀನ್ ಶಂಕರ್, ಮಯೂರ ರಾಘವೇಂದ್ರ, ಆರ್.ಜೆ. ಸೌಜನ್ಯ, ವರ್ಷಿಣಿ ಜಾನಕೀರಾಮ್, ಆರ್ ಅಭಿಲಾಷ್, ಯಶ್ ಶೆಟ್ಟಿ ಕಾಣಿಸಿಕೊಂಡಿದ್ದಾರೆ.

ರಘು ದೀಕ್ಷಿತ್ ಹಾಗೂ ವಾರಿಜಶ್ರೀ ವೇಣುಗೋಪಾಲ್ ಗೀತೆಗೆ ಧ್ವನಿ ನೀಡಿದ್ದಾರೆ. ತಮ್ಮ ಬಹುಮುಖ ಪ್ರತಿಭೆಯನ್ನು ಬಳಸಿಕೊಂಡು ಸಂಗೀತ ನಿರ್ದೇಶಕ ಹರೀಶ್ ಆರ್.ಕೆ. ಹಾಗೂ ಸಿದ್ಧಾರ್ಥ್ ಹಾಡನ್ನು ಸಂಯೋಜಿಸಿದ್ದಾರೆ. ಸಾಹಿತ್ಯವೂ ಹರೀಶ್‌ ಆರ್‌.ಕೆ. ಅವರದ್ದು. ಮನು ಸೆಡ್‌ಗಾರ್ ಈ ವಿಡಿಯೋ ಸಂಕಲನ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT